Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

SAD NEWS : ಸರಸ್ವತಿ ಪುತ್ರ ಎಸ್ ಎಲ್ ಭೈರಪ್ಪ ಇನ್ನಿಲ್ಲ 

Advertisement
ಬೆಂಗಳೂರು : ಪದ್ಮಭೂಷಣ ಪುರಸ್ಕೃತಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ (94) ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಎಸ್.ಎಸ್ ಭೈರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ (ಎಸ್.ಎಲ್ ಭೈರಪ್ಪ) ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ.

ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ ೨೬-೦೭-೧೯೩೪ ರಂದು ಹುಟ್ಟಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು. ಕಿತ್ತು ತಿನ್ನುವ ಬಡತನ, ಬೇಜವಾಬ್ದಾರಿ ತಂದೆ, ಪ್ಲೇಗ್ ಮಾರಿಯಿಂದ ತತ್ತರಗೊಂಡ ಪರಿಸರದಲ್ಲೂ ಅವರ ಸಣ್ಣ ವಯಸ್ಸಿನಲ್ಲೇ ಅವರ ತಾಯಿಯ ಧೀಮಂತಿಕೆಯನ್ನು ಮೈಗೂಡಿಸಿ ಕೊಂಡರು. ಶಾಲಾ ದಾಖಲೆಗಳ ಪ್ರಕಾರ ಅವರ ಜನ್ಮದಿನ ೨೦-೦೮-೧೯೩೧ ಎಂದು ಅವರು ತಮ್ಮ ಆತ್ಮಕಥೆ ಭಿತ್ತಿಯಲ್ಲಿ ಹೇಳಿಕೊಂಡಿದ್ದಾರೆ.

ಎಸ್.ಎಲ್ ಭೈರಪ್ಪ ಕಾದಂಬರಿಗಳು

ಭೀಮಕಾಯ

ಬೆಳಕು ಮೂಡಿತು

ಧರ್ಮಶ್ರೀ – (೧೯೬೧)

ದೂರ ಸರಿದರು- (೧೯೬೨)

ಮತದಾನ – (೧೯೬೫)

ವಂಶವೃಕ್ಷ- (೧೯೬೫)

ಜಲಪಾತ (ಕಾದಂಬರಿ)- (೧೯೬೭)

ನಾಯಿ ನೆರಳು- (೧೯೬೮)

ತಬ್ಬಲಿಯು ನೀನಾದೆ ಮಗನೆ-(೧೯೬೮)

ಗೃಹಭಂಗ-(೧೯೭೦)

ನಿರಾಕರಣ-(೧೯೭೧)

ಗ್ರಹಣ-(೧೯೭೨)

ದಾಟು -(೧೯೭೩)

ಅನ್ವೇಷಣ-(೧೯೭೬)

ಪರ್ವ-(೧೯೭೯)

ನೆಲೆ -(೧೯೮೩)

ಸಾಕ್ಷಿ -(೧೯೮೬)

ಅಂಚು-(೧೯೯೦)

ತಂತು -(೧೯೯೩)

ಸಾರ್ಥ-(೧೯೯೮)

ಮಂದ್ರ-(೨೦೦೧)

ಆವರಣ-(೨೦೦೭)

ಕವಲು – (೨೦೧೦)

ಯಾನ – (೨೦೧೪)

ಉತ್ತರಕಾಂಡ-(೨೦೧೭)

ಆತ್ಮ ಚರಿತ್ರೆ

• ಭಿತ್ತಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್