LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪಂಚ ಭೂತಗಳಲ್ಲಿ ಲೀನರಾದ ಅಭಿನಯ ಸರಸ್ವತಿ : ಇನ್ನೂ ನೆನಪು ಮಾತ್ರ 

Advertisement
ಬೆಂಗಳೂರು : ಭಾರತೀಯ ಚಿತ್ರರಂಗದ 'ಅಭಿನಯ ಸರಸ್ವತಿ', ಹಿರಿಯ ನಟಿ ಬಿ.ಸರೋಜಾದೇವಿ ಇನ್ನೂ ನೆನಪು ಮಾತ್ರ.  ಸರೋಜಾದೇವಿ ಅವರ ಹುಟ್ಟೂರು ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರದಲ್ಲಿ ಇಂದು ಅವರ ಅಂತ್ಯಕ್ರಿಯೆ ನೆರವೇರಿದೆ. ಒಕ್ಕಲಿಗ ಸಂಪ್ರದಾಯದಂತೆ ಅವರನ್ನ ಮಣ್ಣು ಮಾಡಲಾಯಿತು.

ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಪುತ್ರ ಗೌತಮ್ ಅಂತಿಮ ವಿಧಿ ವಿಧಾನ ಪೂರೈಸಿದರು. ಇದಕ್ಕೂ ಮುನ್ನ ಪೊಲೀಸರು ಕುಶಾಲ ತೋಪು ಸಿಡಿಸಿ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಸರೋಜಾದೇವಿ ಕುಟುಂಬಸ್ಥರು, ಗಣ್ಯರು, ಅಭಿಮಾನಿಗಳು ನೆರೆದಿದ್ದರು.

ಬೆಂಗಳೂರಿನ ನಿವಾಸದಿಂದ ಇಂದು ಚನ್ನಪಟ್ಟಣಕ್ಕೆ ಮೆರವಣಿಗೆ ಮೂಲಕ ಪಾರ್ಥಿವ ಶರೀರ ಸ್ಥಳಾಂತರ ಮಾಡಲಾಯಿತು. ದಶಾವರ ಗ್ರಾಮದ ತೋಟದಲ್ಲಿ ಇರುವ ಸರೋಜಾದೇವಿಯವರ ತಾಯಿ ರುದ್ರಮ್ಮನವರ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.

ಬಿ. ಸರೋಜದೇವಿ ಕನ್ನಡದ ಹಿರಿಯ ಚಲನಚಿತ್ರ ತಾರೆಯರಲ್ಲಿ ಒಬ್ಬರು. ಒಂದು ಕಾಲದಲ್ಲಿ ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ. ಕಿತ್ತೂರು ಚೆನ್ನಮ್ಮ ಚಿತ್ರದಲ್ಲಿ ಹೂಂಕರಿಸಿದ್ದ ಬಿ.ಸರೋಜಾದೇವಿ ಬಭ್ರುವಾಹನ ಚಿತ್ರದಲ್ಲಿ ಚಿತ್ರಾಂಗದೆಯಾಗಿದ್ದರು.

ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿರುವ ಭಾರತೀಯ ನಟಿ. ಅವರು ಏಳು ದಶಕಗಳಲ್ಲಿ ಸುಮಾರು ೨೦೦ ಚಿತ್ರಗಳಲ್ಲಿ ನಟಿಸಿದ್ದಾರೆ.

ಆಕೆಯನ್ನು ಕನ್ನಡದಲ್ಲಿ “ಅಭಿನಯ ಸರಸ್ವತಿ” (ನಟನೆಯ ಸರಸ್ವತಿ) ಮತ್ತು ತಮಿಳಿನಲ್ಲಿ “ಕನ್ನಡತು ಪೈಂಗಿಲಿ” (ಕನ್ನಡದ ಗಿಳಿ) ಎಂಬ ಉಪನಾಮಗಳಿಂದ ಕರೆಯಲಾಗುತ್ತದೆ. ಅವರು ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಟಿಯರಲ್ಲಿ ಒಬ್ಬರು.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ