ಬಾಗಲಕೋಟೆ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು 16 ವರ್ಷದ ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಅತ್ಯಾಚಾರ ಘಟನೆ ನಡೆದಿದೆ.
26 ವರ್ಷದ ಯುವಕನಿಂದ ಈ ಒಂದು ಅತ್ಯಾಚಾರ ಎಸಿಗಿರುವ ಆರೋಪ ಕೇಳಿ ಬಂದಿದ್ದು ಬಾಲಕಿ ಮೂತ್ರ ವಿಸರ್ಜನೆಗೆ ಹೋಗಿದ್ದಾಗ ಕಾಮುಕ ಆಕೆಯನ್ನು ಹೊತ್ತೈದು ಅತ್ಯಾಚಾರ ಎಸಗಿದ್ದಾನೆ.
ಸಂತ್ರಸ್ತೆ ಸದ್ಯ ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು ಜಮಖಂಡಿ ಗ್ರಾಮೀಣ ಠಾಣ ಪೊಲೀಸ್ರು ವಿಚಾರಣೆ ನಡೆಸುತ್ತಿದ್ದಾರೆ.


