ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿರುವ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಇಡಿ ದಾಳಿ ನಮಗೆ ಗೊತ್ತಿಲ್ಲದ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ನಡೆದಿದೆ. ಈ ಹಿಂದೆಯೀ ಅವರ ಮನೆ ಮೇಲೆ ಇಡಿ ದಾಳಿ ನಡೆದಿತ್ತು ಎಂದರು.
ಸತೀಶ್ ಜಾರಕಿಹೊಳಿ ಹಿರಿಯ ಸಚಿವರು. ವ್ಯಾಪಾರ, ವಹಿವಾಟು ನಡೆಸುತ್ತಿದ್ದಾರೆ. ಸಮಾಜ ಸೇವೆ ಮಾಡಿದ್ದಾರೆ. ಯಾವುದೇ ಮುಚ್ಚು ಮರೆ ಇಲ್ಲ. ಯಾವುದೇ ತನಿಖೆ ನಡೆಸಿದರೂ ಅದಕ್ಕೆ ಅವರು ಉತ್ತರ ಕೊಡುತ್ತಾರೆ. ಯಾರೂ ಗಾಬರಿ ಪಡಬೇಕಾಗಿಲ್ಲ ಎಂದು ಹೇಳಿದರು.
ಸತೀಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ. ಅವರ ಜೊತೆ ಪಕ್ಷ ಮತ್ತು ಸರ್ಕಾರ ಶೇಕಡಾ ನೂರರಷ್ಟು ಗಟ್ಟಿಯಾಗಿ ನಿಲ್ಲಲಿದೆ. ಅವರು ಯಾವ ತನಿಖೆ ಎದುರಿಸಲು ಸಿದ್ಧರಿದ್ದಾರೆ ಎಂದರು.
ಇದೊಂದು ರಾಜಕೀಯ ಪ್ರೇರಿತವಾದ ದಾಳಿ. ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗುತ್ತಿದೆ. ಸತೀಶ್ ಜಾರಕಿಹೊಳಿ ಬೆಳವಣಿಗೆಗಳನ್ನು ಸಹಿಸದೇ ಇಂತಹ ದಾಳಿ ಮೂಲಕ ಅವರನ್ನು ಕಟ್ಟಿಹಾಕುವ ಯತ್ನ ನಡೆಯುತ್ತಿದೆ ಎಂದು ಕಿಡಿಕಾರಿದರು.


