Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಕ್ಷ್ಮಣ್ ಸವದಿ, ಡಿಕೆಶಿ ವಿರುದ್ಧ ಸತೀಶ್ ಜಾರಕಿಹೊಳಿ ತೀವ್ರ ಅಸಮಾಧಾನ

Advertisement

ಬೆಳಗಾವಿ :  ನಮ್ಮ ನಾಯಕರ ಅತಿಯಾದ ವಿಶ್ವಾಸವೇ ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ತಲುಪದೇ ಇರಲು ಕಾರಣ ಎಂದು ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದರ ಬೆನ್ನಲ್ಲೇ ಇದೀಗ ಬೆಳಗಾವಿ ಲೋಕಸಭಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ್ದು, ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಲು ನಾನು ಕಾರಣವಲ್ಲ. 5 ಲಕ್ಷ ಲಿಂಗಾಯತ ಮತದಾರರಿದ್ದಾರೆ. ಅವರು ನನ್ನ ಮಾತು ಕೇಳುತ್ತಾರಾ? ಮತದಾರರನ್ನು ಸೆಳೆಯುವಲ್ಲಿ ಸಚಿವೆ ಹೆಬ್ಬಾಳ್ಕರ್ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.


ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಲು ನಾನು ಕಾರಣವಲ್ಲ. 5 ಲಕ್ಷ ಲಿಂಗಾಯತ ಮತದಾರರಿದ್ದಾರೆ.
ಅವರು ನನ್ನ ಮಾತು ಕೇಳುತ್ತಾರಾ? ಮತದಾರರನ್ನು ಸೆಳೆಯುವಲ್ಲಿ ಸಚಿವೆ ಹೆಬ್ಬಾಳ್ಕರ್ ವಿಫಲರಾಗಿದ್ದಾರೆ.


ಇದೇ ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ‌ಸೋಲಿಗೆ ಕಾರಣ. ನಾವು ಗೆಲ್ಲುವ‌ ನಿಟ್ಟಿನಲ್ಲಿ ಕೆಲಸ ಮಾಡಿದ್ದೇವೆ, ಸೋಲಿಸಲು ಅಲ್ಲ. ಬೆಳಗಾವಿ ಗ್ರಾಮೀಣ ‌ಕ್ಷೇತ್ರದಲ್ಲೇ ಮೃಣಾಲ್‌ಗೆ ಹಿನ್ನಡೆ ಆಗಿದೆ. ಲಿಂಗಾಯತ, ಮರಾಠ ಮತ ಸೆಳೆಯಲು ವಿಫಲವಾಗಿದ್ದರಿಂದ ಸೋಲಾಗಿದೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಸತೀಶ್ ಜಾರಕಿಹೊಳಿ ತಮ್ಮ ಮೇಲಿನ ಆರೋಪದ ಬಗ್ಗೆ ಸ್ಪಷ್ಟನೆ ನೀಡಿದರು.


ಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಥಣಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಕಡಿಮೆ‌ ಲೀಡ್ ಸಿಕ್ಕಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ನಮ್ಮವರೇ ನಮಗೆ ಮೋಸ ಮಾಡಿದ್ರು.


ಅಥಣಿಯಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದವರಿಂದ ಚುನಾವಣೆಯಲ್ಲಿ ಮೋಸ ಆಗಿದೆ. ಮೊದಲೇ ಅವರು ಮೈಂಡ್ ಸೆಟ್ ಮಾಡಿಕೊಂಡಿದ್ರು. ನಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಮ್ಮ ಪರವಾಗಿ ಇದ್ದರು ಎಂದು ಪರೋಕ್ಷವಾಗಿ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವಿರುದ್ಧವೂ ಸತೀಶ್ ಜಾರಕಿಹೊಳಿ ಅಸಮಾಧಾನ ಹೊರಹಾಕಿದರು.


ಡೈರೆಕ್ಟರ್, ಪ್ರೊಡ್ಯೂಸರ್ ಫೇಲ್ ಆದರೆ ಈ ರೀತಿಯ ಫಲಿತಾಂಶ ನಿರೀಕ್ಷಿತ. ಚುನಾವಣೆಗೆ ಸಮಯ ಕಡಿಮೆ ಇರುತ್ತದೆ, ಆ ಸಮಯದಲ್ಲಿ ಅಲರ್ಟ್ ಇರಬೇಕು. ಇಲ್ಲವಾದರೆ ಚುನಾವಣೆ ಬಂದು ಹೋಗುತ್ತದೆ, ಆಗಲೇ ನಾವು ಕೆಲಸ ಮಾಡಬೇಕು.
ನಮ್ಮ ನಾಯಕರು ಹಲವು ಕ್ಷೇತ್ರಗಳನ್ನು ನಿರ್ಲಕ್ಷಿಸಿದ್ದೂ ನಮ್ಮ ಹಿನ್ನಡೆಗೆ ಕಾರಣ. ಗೆಲ್ಲುವ ವಿಶ್ವಾಸದ ಕಾರಣಕ್ಕೆ ಇನ್ನೂ ಹಲವು ಕ್ಷೇತ್ರಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಚಾರ ಆಗಲಿಲ್ಲ. ಕೆಲವಡೆ ಕಡಿಮೆ ಮತಗಳ ಅಂತರದಿಂದ ಸೋಲಲು ನಮ್ಮ ನಿರ್ಲಕ್ಷ್ಯ ಕಾರಣ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ