LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ದೆಹಲಿಗೆ ಹೊರಟ ಸತೀಶ್ ಜಾರಕಿಹೊಳಿ : ಕುತೂಹಲ ಮೂಡಿಸಿದ ಸಚಿವರ ನಡೆ

Advertisement

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡುವುದಾಗಿ ಬೆಳಿಗ್ಗೆ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

 ಇದರ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಸಂಜೆ 5 ಗಂಟೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣಿಸಲಿದ್ದಾರೆ.

ನಾಗೇಂದ್ರ ಅವರ ರಾಜೀನಾಮೆ ವಿಚಾರದ ಬಿಸಿಯಾದ ಚರ್ಚೆಯ ನಡುವೆಯೇ ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದು, ಅವರ ಈ ದಿಢೀರ್ ದೆಹಲಿ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇನ್ನೊಂದೆಡೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ ಬೆಳಿಗ್ಗೆ ದೆಹಲಿಗೆ ತೆರಳಲಿದ್ದು, ಅದಕ್ಕೂ ಮುಂಚಿತವಾಗಿಯೇ ಸತೀಶ್ ಜಾರಕಿಹೊಳಿ ದೆಹಲಿ ತಲುಪುತ್ತಿರುವುದು ಹಲವು ರಾಜಕೀಯ ಲೆಕ್ಕಾಚಾರಗಳಿಗೆ ದಾರಿ ಮಾಡಿಕೊಟ್ಟಿದೆ.

ಹೆಚ್ಚುವರಿ ಉಪಮುಖ್ಯಮಂತ್ರಿ ಸ್ಥಾನದ ಬೇಡಿಕೆ ರಾಜ್ಯ ಕಾಂಗ್ರೆಸ್‌ನಲ್ಲಿ ಮುನ್ನೆಲೆಯಲ್ಲಿದ್ದು, ಹೈಕಮಾಂಡ್ ಭೇಟಿಯ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಮತ್ತೊಮ್ಮೆ ಈ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಸಚಿವ ಸತೀಶ್ ಜಾರಕಿಹೊಳಿಗೆ ಮನೆ ಮೇಲೆ ಇಡಿ ದಾಳಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ : ಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹ ಸಿಎಂ ಸಂಪರ್ಕ ಸಲಹೆಗಾರರಾಗಿ ದೀಪಕ್ ತಿಮ್ಮಯ್ಯ ನೇಮಕ ನಾಳೆ ಡಿ. ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ 100 ದಿನ : ಮಹತ್ವದ ಘೋಷಣೆ ಸಾಧ್ಯತೆ ಕಾಸ್ಮೆಟಿಕ್ ಟ್ರೀಟ್‌ಮೆಂಟ್ ಬಳಿಕ ಉದ್ಯಮಿ ದುರ್ಮರಣ :7 ಕೋಟಿ ರೂ. ಚಿನ್ನದ ಶವಪೆಟ್ಟಿಗೆಯಲ್ಲಿ ಅಂತ್ಯಕ್ರಿಯೆ ನಾಳೆಯಿಂದ ಇಂಗ್ಲೆಂಡ್- ಪಾಕಿಸ್ತಾನ ತೃತೀಯ ಟೆಸ್ಟ್ ಶುರು ವಿಜಯೇಂದ್ರ ಏನೇ ಪಾದಯಾತ್ರೆ ಮಾಡಿದ್ರೂ ರಾಜ್ಯಾಧ್ಯಕ್ಷ ಸ್ಥಾನದಿಂದ ಔಟ್ ಫಿಕ್ಸ್ : ಯತ್ನಾಳ್ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಡಿ. ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ.  ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್