Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್​​ಸಿ, ಎಸ್​ಟಿ ಶಾಸಕರೊಂದಿಗೆ ಸತೀಶ್ ಜಾರಕಿಹೊಳಿ ಸಭೆ 

Advertisement
ಬೆಂಗಳೂರು : ಕಾಂಗ್ರೆಸ್ ನಲ್ಲಿ ಸದ್ಯ ಎಲ್ಲವೂ ಸರಿಯಿಲ್ಲ. ನಾಯಕರ ನಡುವಿನ ಬಣ ಬಡಿದಾಟ ಪಕ್ಷದೊಳಗೆ ದೊಡ್ಡ ಕಂದಕವನ್ನೇ ಸೃಷ್ಟಿಮಾಡಿದೆ . ಈ ನಡುವೆ ಸಾಹುಕಾರ್ ಸತೀಶ್ ಜಾರಕಿಹೊಳಿ ಮನೆ ದೊಡ್ಡ ಬೆಳವಣಿಗೆಗೆ ಸಾಕ್ಷಿಯಾಗಿದೆ.

ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಂಗಳವಾರ ರಾತ್ರಿ ಹಿಂದುಳಿದ ವರ್ಗಗಳ ಶಾಸಕರು ಸಭೆ ಸೇರಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.ಈ ವೇಳೆ ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಮಹತ್ವದ ಚರ್ಚೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಭೆಯಲ್ಲಿ ಎಸ್​​ಸಿ, ಎಸ್​ಟಿ ಸಮುದಾಯಗಳ ಶಾಸಕರು ಬೇಡಿಕೆ ಪಟ್ಟಿಯನ್ನ ಸಿದ್ಧಪಡಿಸಿದ್ದಾರೆ. ಅನೇಕ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಮುದಾಯದ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚೆ ನಡೆಸಲಾಗಿದೆ.

ಇನ್ನು, ಸತೀಶ್ ಜಾರಕಿಹೊಳಿ ನಿವಾಸದ ಸಭೆಯಲ್ಲಿ ಸಚಿವ ಕೆಎನ್ ರಾಜಣ್ಣ ಭಾಗಿಯಾಗಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಜೊತೆಗಿನ ಸಭೆಗೆ ಗೈರಾಗಿದ್ದ ಅವರು ಸಮುದಾಯದ ಸಭೆಯಲ್ಲಿ ಭಾಗಿಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ