ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿಗೆ ಇಡಿ ಶಾಕ್ ನೀಡಿದೆ. ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ಆರು ಕಡೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಸಹೋದರಿಯ ಪತಿ ಆಗಿರುವ ವೈ.ಮಂಜುನಾಥ್ ಅವರ ಬೆಳಗಾವಿಯ ಹನುಮಾನ್ ನಗರದಲ್ಲಿರುವ ನಿವಾಸ ಸೇರಿದಂತೆ ಆರು ಕಡೆ ದಾಳಿ ಮಾಡಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
10ಕ್ಕೂ ಅಧಿಕ ಅರೆಸೇನಾ ಪಡೆ ಭದ್ರತೆಯಲ್ಲಿ ಇಡಿ ಯಿಂದ ಪರಿಶೀಲನೆ ನಡೆಸಲಾಗಿದೆ. ಬೆಳಗಾವಿಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಯಾಗಿ ಮಂಜುನಾಥ್ ಕೆಲಸ ಮಾಡುತ್ತಿದ್ದಾರೆ.


