Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗಬಹುದು : ಕೆ. ಎನ್ ರಾಜಣ್ಣ

Advertisement
ತುಮಕೂರು : ಆಗಸ್ಟ್-ಸೆಪ್ಟೆಂಬರ್​ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಸಹಕಾರ ಸಚಿವ ಕೆಏನ್ ರಾಜಣ್ಣ ಬಾಂಬ್ ಸಿಡಿಸಿದಿದ್ದರು.

ಇದೀಗ ಉತ್ತರ ಕರ್ನಾಟಕ ಭಾಗದ, ಎಸ್​​.ಟಿ ನಾಯಕ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗಬಹುದು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ತುಮಕೂರಿನಲ್ಲಿ ಮಾತಾಡಿದ ರಾಜಣ್ಣ, ನಾನು ಹೇಳಿದ ಕ್ರಾಂತಿ ಏನು ಅನ್ನೋದನ್ನ ಹೇಳಿದ್ದಾರೆ. ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಆಗಬಹುದು. ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾವಣೆ ಆಗುತ್ತದೆ. ಯಾವಾಗ ಅಂತ ಹೈಕಮಾಂಡ್ ನಿರ್ಧರಿಸುತ್ತಾರೆ ಎಂದು ಕೆ.ಎನ್ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ?

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರಾ ಎಂದು ಪ್ರಶ್ನಿಸಿದ್ದಕ್ಕೆ ಉತ್ತರಿಸಿದ ರಾಜಣ್ಣ, 'ಡಿಕೆ ಶಿವಕುಮಾರ್ ಸಿಎಂ ಆದರೂ ಆಗಲಿ ಪಿಎಂ ಆದರು ಆಗಲಿ. ಡಿ.ಕೆ ಶಿವಕುಮಾರ್ ಸಿಎಂ ಆಗೋದು ಹೈಕಮಾಂಡ್​ಗೆ ಬಿಟ್ಟ ವಿಚಾರ. ಯಾರಿಗೆ ಯಾವ ಸ್ಥಾನ ಕೊಡುತ್ತಾರೋ ಎಲ್ಲವೂ ಕೂಡ ಹೈಕಮಾಂಡ್ ಅವರ ನಿರ್ಧಾರಕ್ಕೆ ಬಿಟ್ಟಿದ್ದು' ಎಂದರು.

ಕೇಂದ್ರದಲ್ಲೂ ಆಗಬಹುದು ಬದಲಾವಣೆ

ಕೇಂದ್ರ ಸರ್ಕಾರದಲ್ಲೂ ಸಹ ಬದಲಾವಣೆ ನಿರೀಕ್ಷೆ ಮಾಡಬಹುದು. ಆರ್​ಎಸ್‌ಎಸ್​ನವರ ಸೆಟ್ ಆಫ್ ಪ್ರಿನ್ಸಿಪಲ್​ನಂತೆ 75 ವರ್ಷದ ನಂತರ ಯಾವುದೇ ಹುದ್ದೆಯಲ್ಲಿ ಇರಲಿಕ್ಕಿಲ್ಲ.

ಹಾಗಾಗಿಯೇ ಅಡ್ವಾಣಿಗೆ ಪ್ರಧಾನಿ ಸ್ಥಾನ ಸಿಕ್ಕಿಲ್ಲ. ಈಗ ಅದೇ ಪ್ರಿನ್ಸಿಪಲ್ ಮೋದಿಯವರಿಗೆ ಆಗುತ್ತದೆ. ಅದು ಒಂದು ಬದಲಾವಣೆ ಕ್ರಾಂತಿ ಅಲ್ವಾ. ಅದನ್ನು ಯಾಕೆ ನೀವು ಊಹೆ ಮಾಡೋದಿಲ್ಲ ಎಂದು ರಾಜಣ್ಣ ಪ್ರಶ್ನೆ ಮಾಡಿ ದ್ರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ