LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಮದುರ್ಗ- ಧಾರವಾಡ ರೇಲ್ವೇ ಮಾರ್ಗ ನಿರ್ಮಿಸದಿದ್ದರೆ ಸತ್ಯಾಗ್ರಹ ಖಚಿತ

Advertisement
ರಾಮದುರ್ಗ : ಅತಿ ಶೀಘ್ರದಲ್ಲಿ ರಾಮದುರ್ಗ ಟು ಧಾರವಾಡ ರೈಲ್ವೆ ಮಾರ್ಗ ನಿರ್ಮಾಣ ಮಾಡಬೇಕು ಇಲ್ಲವಾದರೆ ಸತ್ಯಾಗ್ರ ಖಚಿತ ಲೋಕಾಪುರದಿಂದ ರಾಮದುರ್ಗ ಮುಖಾಂತರ ಧಾರವಾಡಕ್ಕೆ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಒತ್ತಾಯಿಸಿ, ರೈಲು ಹೋರಾಟ ಸಮಿತಿಯ ಪದಾಧಿಕಾರಿಗಳು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಹೌದು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ ಇಂದು ರಾಮದುರ್ಗ ಮುಖಾಂತರ ಧಾರವಾಡಕ್ಕೆ ಶೀಘ್ರ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳದೇ ಹೋದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಬೇಕಾಗುತ್ತದೆ ಎಂದು ಹೋರಾಟ ಸಮಿತಿಯ ಪದಾಧಿಕಾರಿಗಳು ತಹಶೀಲ್ದಾರ ಮುಖಾಂತರ ಉಭಯ ಸರಕಾರಗಳ ಮುಖ್ಯಸ್ಥರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸೋಮವಾರ ತಹಶೀಲ್ದಾರ್ ಮೂಲಕ ಕೇಂದ್ರದ ರೈಲ್ವೆ ಸಚಿವ, ರಾಜ್ಯದ ರಾಜ್ಯಪಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರಿಗೆ ಮನವಿ ಸಲ್ಲಿಸಿದ ಹೋರಾಟಗಾರರು, ಕಳೆದ 20 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದರೂ ಈ ಭಾಗದ ಜನತೆಯ ಬೇಡಿಕೆ ಈಡೇರಿಸಲು ಉಭಯ ಸರಕಾರಗಳು ಆಸಕ್ತಿ ಹೊಂದಿಲ್ಲ.

ರಾಮದುರ್ಗ ತಾಲೂಕಿನಲ್ಲಿ ರೈಲ್ವೆ ಹೋರಾಟಗಾರರ ಒತ್ತಾಯದ ಮೇರೆಗೆ 2019ರಲ್ಲಿ ಹೊಸ ರೈಲು ಮಾರ್ಗಕ್ಕಾಗಿ ಸರ್ವೆ ಕಾರ್ಯ ನಡೆಸಿದ ಕೇಂದ್ರ ಸರಕಾರ ಕಾಮಗಾರಿ ಆರಂಭಕ್ಕೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. 2019ರ ನಂತರ ರೈಲ್ವೆ ಮಾರ್ಗ ನಿರ್ಮಾಣಕ್ಕೆ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದರೂ ಇಲ್ಲಿಯವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಈ ಭಾಗದ ಜನರ ಬೇಡಿಕೆಗೆ ಉಭಯ ಸರಕಾರಗಳು ಸ್ಪಂದಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟದೊಂದಿಗೆ ತಾಲೂಕಾ ಆಡಳಿತ ಕಚೇರಿ, ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನ್ಯಾಷನಲ್ ಹೋಮನ್ ರೈಟ್ಸ್ ರಾಜ್ಯಾಧ್ಯಕ್ಷ ಹಾಗೂ ರೈಲು ಹೋರಾಟ ಸಮಿತಿಯ ಬಸೀರಅಹ್ಮದ ಬೈರಕದಾರ, ನ್ಯಾಯವಾದಿ ಜಿ.ಬಿ. ಅಮಟೂರ, ಮೋಹನ ಸೋರಿ, ಎಸ್.ಕೆ. ಪಾಟೀಲ, ರಾಜು ಹರ್ಲಾಪೂರ, ರೈತ ಮುಖಂಡ ಜಗದೀಶ ದೇವರಡ್ಡಿ, ಬಸವರಾಜ ಗುರಡ್ಡಿ, ದಾದಾಪೀರ ಹಾಜಿ, ಮಂಜುನಾಥ ಮಾದರ, ಬಿ.ಎಲ್. ಸಂಕನಗೌಡ್ರ, ಲಕ್ಷ್ಮಣ್ ರಾಯಬಾಗ, ದುರ್ಗಪ್ಪ ಬನ್ನಿಗಿಡ , ಇನ್ನು ಅನೇಕ ಸರ್ವ ಸದಸ್ಯರು ಪಾಲ್ಗೊಂಡಿದ್ದರು.

ವರದಿ : ಮಂಜುನಾಥ ಕಲಾದಗಿ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ