Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

40,067 ಅತಿಥಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ಆದೇಶ 

Advertisement

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಮೊದಲ ಹಂತದಲ್ಲಿ 40,067 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

ಸರ್ಕಾರಿ ಶಾಲೆಗಳಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, 2026- 27ನೇ ಶೈಕ್ಷಣಿಕ ಸಾಲಿನಲ್ಲಿ 40,000 ಪ್ರಾಥಮಿಕ ಶಾಲಾ ಶಿಕ್ಷಕರು, 11,000 ಪ್ರೌಢಶಾಲಾ ಶಿಕ್ಷಕರು ಸೇರಿ ಒಟ್ಟು 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮೋದನೆ ನೀಡಿದೆ.

ಈ ಪೈಕಿ ಮೊದಲ ಹಂತದಲ್ಲಿ ಪ್ರಾಥಮಿಕ ಶಾಲೆಗಳಿಗೆ 30,337, ಪ್ರೌಢಶಾಲೆಗಳಿಗೆ 9730 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆದೇಶಿಸಲಾಗಿದೆ.

ನೇಮಕ ಮಾಡಿಕೊಳ್ಳಲಿರುವ ಅತಿಥಿ ಶಿಕ್ಷಕರಿಗೆ ಮಾಸಿಕ 12,000 ರೂ. ಗೌರವ ಸಂಭಾವನೆ ನಿಗದಿಪಡಿಸಲಾಗಿದೆ.

ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರಿಗೆ ಅತಿಥಿ ಶಿಕ್ಷಕರ ಆಯ್ಕೆಯ ಜವಾಬ್ದಾರಿ ನೀಡಲಾಗಿದೆ. ಕನಿಷ್ಠ ವಿದ್ಯಾರ್ಹತೆ ಮತ್ತು ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸೂಚಿಸಲಾಗಿದೆ.

    

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST