ಉತ್ತರ ಪ್ರದೇಶ: ಸರ್ಕಾರಿ ಅಧಿಕಾರಿಗಳ ನಿವಾಸದಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬ ಸೇವೆ ಮಾಡುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಎಸ್‌ಡಿಎಂ ಮನೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಎಸ್‌ಡಿಎಂ ಚಾಲಕ ಮನೋಜ್ ಕುಮಾರ್ ಕಾಲನ್ನು, ಸಮವಸ್ತ್ರದಲ್ಲಿರುವ ಯುಪಿ ಪೊಲೀಸ್ ಕಾನ್‌ಸ್ಟೆಬಲ್ ರಜತ್ ಒತ್ತುತ್ತಿದ್ದಾರೆ.
ಯಾರೋ ಈ ದೃಶ್ಯವನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿಡಿದ್ದಾರೆ ಎನ್ನಲಾಗಿದೆ.
ಪೊಲೀಸ್ ಸಿಬ್ಬಂದಿ ಯುನಿಫಾರ್ಮ್ ಮೇಲೆಯೇ ಅಧಿಕಾರಿಯ ಚಾಲಕನಿಗೆ ಕಾಲು ಮಸಾಜ್ ಮಾಡುತ್ತಿರುವುದು, ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪೊಲೀಸನ್ನು ವೈಯಕ್ತಿಕ ಕೆಲಸಕ್ಕೆ ಬಳಸಿಕೊಳ್ಳಲಾಗುತ್ತಿದೆಯೇ ಎಂಬ ಚರ್ಚೆಯೂ ಜೋರಾಗಿದೆ.


