Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ಹಣದಿಂದ 40ಕ್ಕೂ ಹೆಚ್ಚು ಮಕ್ಕಳಿಗೆ ಸ್ಕೂಲ್ ಬ್ಯಾಗ್‌ ಗಳನ್ನ ನೀಡಿದ SDMC ಸದಸ್ಯೆಯರು

Advertisement

ಗದಗ : ಸರ್ಕಾರ ನೀಡುವ ಹಣವನ್ನು ಸ್ವಂತಕ್ಕೆ ಬಳಸಿಕೊಳ್ಳುವವರ ಮಧ್ಯೆ, ಇಲ್ಲೊಂದು ಮಹಿಳಾ ತಂಡ ವಿಭಿನ್ನವಾಗಿ ಯೋಚಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಮತ್ತು ಹಾಜರಾತಿಯನ್ನು ಹೆಚ್ಚಿಸಬೇಕು ಎಂಬ ಉದಾತ್ತ ಉದ್ದೇಶದಿಂದ ಮಹಿಳೆಯರು ಈ ಅಪೂರ್ವ ಹೆಜ್ಜೆ ಇಟ್ಟಿದ್ದಾರೆ.

ಗದಗ ಜಿಲ್ಲೆಯ ರೋಣ ತಾಲೂಕಿನ ಕೋತಬಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಿಳಾ ಎಸ್‌ಡಿಎಂಸಿ (SDMC) ಸದಸ್ಯೆಯರು ತಮಗೆ ಸರ್ಕಾರದಿಂದ ಬರುತ್ತಿದ್ದ 'ಗೃಹಲಕ್ಷ್ಮಿ' ಯೋಜನೆಯ ಹಣವನ್ನು ಒಟ್ಟುಗೂಡಿಸಿದ್ದಾರೆ. 

ಈ ಹಣದಿಂದ ಪ್ರಸಕ್ತ ಸಾಲಿನಲ್ಲಿ ಒಂದನೇ ತರಗತಿಗೆ ಹೊಸದಾಗಿ ದಾಖಲಾದ 40ಕ್ಕೂ ಹೆಚ್ಚು ಮಕ್ಕಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗ್‌ ಗಳನ್ನು ಖರೀದಿಸಿಕೊಟ್ಟಿದ್ದಾರೆ.

ಸೋಮವಾರ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ, ಈ ಮಹಿಳೆಯರು ತಮ್ಮ ಸ್ವಂತ ಹಣದಿಂದ ತಂದ ಬ್ಯಾಗ್‌ ಗಳನ್ನು ಮಕ್ಕಳಿಗೆ ಉಡುಗೊರೆಯಾಗಿ ವಿತರಿಸುವ ಮೂಲಕ ಮಕ್ಕಳ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ಮಹಿಳೆಯರ ಈ ಸಾಮಾಜಿಕ ಕಳಕಳಿಗೆ ಈಗ ಸಾರ್ವಜನಿಕ ವಲಯದಲ್ಲಿ ಭಾರಿ ಶ್ಲಾಘನೆ ವ್ಯಕ್ತವಾಗುತ್ತಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST