LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಲಿಂಗ ತಾರತಮ್ಯಕ್ಕೆ ಸೆಡ್ಡು : ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದ ಸಹೋದರಿಯರು

Advertisement
ಚಿಕ್ಕಮಗಳೂರು : ಸಾಮಾನ್ಯವಾಗಿ ಹಿಂದೂ ಸಂಪ್ರದಾಯದಲ್ಲಿ ಮನೆಯಲ್ಲಿ ಯಾರಾದರೂ ಮೃತಪಟ್ಟರೆ ಅಂತ್ಯ ಸಂಸ್ಕಾರ ಹಾಗೂ ದೇಹಕ್ಕೆ ಅಗ್ನಿಸ್ಪರ್ಶ ಮಾಡುವ ವಿಧಿ-ವಿಧಾನಗಳನ್ನು ಸಾಮಾನ್ಯವಾಗಿ ಗಂಡು ಮಕ್ಕಳೇ ಮಾಡುವ ಸಂಪ್ರದಾಯ ಈ ಹಿಂದಿನಿಂದಲೂ ಇದೆ.

ಆದರೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ಸಂಪ್ರದಾಯಕ್ಕೆ ಸೆಡ್ಡು ಹೊಡೆದು, ಅದಕ್ಕೆ ಮೀರಿದ ಘಟನೆಯೊಂದು ನಡೆದಿದೆ.ಇದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ಹೆಣ್ಣುಮಕ್ಕಳು ತಂದೆಯ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಲಿಂಗ ಸಮಾನತೆಯ ಸಂದೇಶ ಸಾರಿದ್ದಾರೆ.

ಭಾವಸಾರ ಕ್ಷತ್ರಿಯ ಸಮಾಜದ ಬಿ.ಎಸ್.ವಿಶ್ವನಾಥ ಎಂಬವರು ನಿಧನರಾಗಿದ್ದರು. ಆದರೆ, ಅವರಿಗೆ ಗಂಡು ಮಕ್ಕಳು ಇರಲಿಲ್ಲ. ಹೀಗಾಗಿ, ಮಗಳು ಐಶ್ವರ್ಯ ಅವರೇ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ತಂಗಿ ಹಾಗೂ ಭಾವನ ಜೊತೆ ಸೇರಿ ತಂದೆಯ ಅಂತಿಮ ಧಾರ್ಮಿಕ ವಿಧಿ, ವಿಧಾನಗಳನ್ನು ಪೂರೈಸಿದ್ದಾರೆ.

ಮೃತದೇಹದ ಸುತ್ತ ಹೆಗಲ ಮೇಲೆ ಕುಡಿಕೆ ಹೊತ್ತು ಸಂಪ್ರದಾಯದಂತೆ ವಿಧಿ ವಿಧಾನಗಳನ್ನು ನೆರವೇರಿಸಿದ ಹೆಣ್ಣುಮಗಳು ಎಲ್ಲರ ಗಮನ ಸೆಳೆದರು. ಬೀರೂರಿನ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು. ಕಡೂರು ತಾಲೂಕಿನ ಬೀರೂರಿನಲ್ಲಿ ನಡೆದ ಈ ಘಟನೆ ಲಿಂಗ ಸಮಾನತೆಗೆ ಉತ್ತಮ ಮಾದರಿಯಾಗಿ ಗಮನ ಸೆಳೆಯುತ್ತಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ