ಬೆಂಗಳೂರು : ಬೆಂಗಳೂರಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ಎನ್ನಲಾದ 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳನ್ನು DRI ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಬೆಂಗಳೂರಿನ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬನಿಂದ ಆಮೆಗಳನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಆರೋಪಿ ಹಸಿರು ಬಣ್ಣದ ಟ್ರಾಲಿ ಬ್ಯಾಗ್‌ನಲ್ಲಿ ಆಮೆಗಳನ್ನು ಸಾಗಿಸುತ್ತಿದ್ದ ಎನ್ನಲಾಗಿದೆ. ಬ್ಯಾಗ್ ಪರಿಶೀಲಿಸಿದಾಗ 6 ಬಟ್ಟೆಯ ಕವರ್‌ಗಳಲ್ಲಿ ಒಟ್ಟು 180 ಜೀವಂತ ಆಮೆಗಳು ಪತ್ತೆಯಾಗಿವೆ.
ವಿಚಾರಣೆ ವೇಳೆ, ಕಲಾಸಿಪಾಳ್ಯದಿಂದ ಟ್ರಾಲಿ ಬ್ಯಾಗ್ ಪಡೆದಿದ್ದಾಗಿ ಆರೋಪಿ ಅಧಿಕಾರಿಗಳಿಗೆ ತಿಳಿಸಿದ್ದಾನೆ ಎನ್ನಲಾಗಿದೆ. ಬಳಿಕ ಆಮೆಗಳನ್ನು ಮೆಜೆಸ್ಟಿಕ್‌ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬನಿಗೆ ತಲುಪಿಸುವಂತೆ ಸೂಚಿಸಲಾಗಿತ್ತು ಎಂದು ಹೇಳಲಾಗಿದೆ.


