LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

​ಬಿಎಸ್ಪಿ ಪಕ್ಷದ ಪಾವಗಡ ತಾಲ್ಲೂಕು ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Advertisement
ಪಾವಗಡ : ತಾಲ್ಲೂಕಿನ ನಿರೀಕ್ಷಣಾ ಮಂದಿರದಲ್ಲಿ ಶನಿವಾರ ನಡೆದ ಬಹುಜನ ಸಮಾಜ ಪಕ್ಷದ (BSP) ಪ್ರಮುಖ ಸಭೆಯಲ್ಲಿ ಪಾವಗಡ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

​ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿಎಸ್ಪಿ ಜಿಲ್ಲಾಧ್ಯಕ್ಷರಾದ ಅಂಜನಮೂರ್ತಿ ಎಂ. ಅವರು, "ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಕಾನ್ಶೀರಾಂ ಅವರ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತಾಗಲು ಸಂಘಟನೆ ಶಕ್ತಿಯುತವಾಗಬೇಕು. ಇಂದು ಆಯ್ಕೆಯಾಗಿರುವ ನೂತನ ಪದಾಧಿಕಾರಿಗಳು ಪಕ್ಷದ ಸಿದ್ಧಾಂತಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡಲಿದ್ದಾರೆ," ಎಂದು ತಿಳಿಸಿದರು.

​ನಂತರ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧಾಕರ್ ಅವರು, "ಮುಂದಿನ ದಿನಗಳಲ್ಲಿ ಪಾವಗಡ ತಾಲ್ಲೂಕಿನಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಶ್ರಮಿಸಲಾಗುವುದು ಎಂದರು.ನೂತನ ಪದಾಧಿಕಾರಿಗಳ ಪಟ್ಟಿ,​ಸಭೆಯಲ್ಲಿ ಈ ಕೆಳಗಿನವರನ್ನು ವಿವಿಧ ಜವಾಬ್ದಾರಿಗಳಿಗೆ ಆಯ್ಕೆ ಮಾಡಲಾಯಿತು ಎಂದು ತಿಳಿಸಿದರು.
​ ಬಿಎಸ್ಪಿ ಪಾವಗಡ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ ಸಮಿತಿ ಅಧ್ಯಕ್ಷರು ಲಕ್ಷ್ಮೀಕಾಂತ್ ,​ಉಪಾಧ್ಯಕ್ಷರು ಅಶೋಕ್ ಬಿ.ಎಂ. ,​ಪ್ರಧಾನ ಕಾರ್ಯದರ್ಶಿಮಂಜುನಾಥ್ ,ಕಾರ್ಯದರ್ಶಿ ಅನಿಲ್ ಕುಮಾರ್,​ಖಜಾಂಚಿ ನರಸಿಂಹಪ್ಪ,BVF (ಬಹುಜನ ವಾಲಂಟರಿ ಫೋರ್ಸ್)ನಿತಿನ್,
​ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳಾದ ಗೋವಿಂದಯ್ಯ, ರಾಜ್ಯ ಸಮಿತಿ ಸದಸ್ಯರಾದ ರುದ್ರಪ್ಪ. ಕರಿಯಣ್ಣ. ಓಂಕಾರ. ಯಶ್ವಂತ್ . ನರಸಪ್ಪ. ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


ವರದಿ:ಶಿವಾನಂದ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ