LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

'ಸ್ವ-ಉದ್ಯೋಗ ತರಬೇತಿ ಪಡೆದು ಸ್ವಾವಲಂಬನೆಯಾಗಿ ಬದುಕಿ'

Advertisement
ಬೈಲಹೊಂಗಲ: ತಾಲೂಕಿನ ಅಮಟೂರು ಕಾರ್ಯಕ್ಷೇತ್ರ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಶ್ರೀ ಭಾರತಾಂಬೆ ಜ್ಞಾನವಿಕಾಸ ಕೇಂದ್ರದಲ್ಲಿ ಗುರುವಾರದಂದು ಸ್ವ ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನು ಶ್ರೀಮತಿ ಸಂಗೀತ ಸೋಗಿನಮನಿ, ಉದ್ಘಾಟಕರಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳಾದ ಶ್ರೀಮತಿ ನೀಲವ್ವ ಆನಿಕಿವಿ ಭಾಗವಹಿಸಿದ್ದರು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಆರ್ ಎಸ್ ಟಿ ಉಪನ್ಯಾಸಕರಾದ ಶ್ರೀಮತಿ ರಾಜೇಶ್ವರಿ ಹಾಗೂ ಬೈಲಹೊಂಗಲ ತಾಲೂಕಿನ ಜ್ಞಾನ ವಿಕಾಸದ ಸಮನ್ವಧಿಕಾರಿ ಶ್ರೀಮತಿ ಶೈಲಾ ಜೆ ಇವರ ಸಮ್ಮುಖದಲ್ಲಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು.

ಪ್ರಾಸ್ತಾವಿಕವಾಗಿ ತಾಲೂಕಿನ ಸಮನ್ವಯಾಧಿಕಾರಿ ಶ್ರೀಮತಿ ಶೈಲಾಜೆ ಮಾತನಾಡಿ ಜ್ಞಾನವಿಕಾಸ ಕಾರ್ಯಕ್ರಮಗಳ ಮೂಲಕ ನಮಗೆಲ್ಲಾ ಹತ್ತು ಹಲವು ಕಾರ್ಯಕ್ರಮಗಳನ್ನು ಲಭಿಸುತ್ತಿದ್ದು ಮಾತೃಶ್ರೀ ಅಮ್ಮನವರ ಹಾಗೂ ಪೂಜ್ಯ ಖಾವಂದರ ಆಶಯದಂತೆ ಮಹಿಳೆಯರ ಸಬಲೀಕರ ಣಕ್ಕಾಗಿ. ಮಹಿಳೆಯರು ಸ್ವಾವಲಂಬಿ ಯಾಗಿ, ಕುಟುಂಬದ ಆರ್ಥಿಕತೆಯಲ್ಲಿ ಸಹಕರಿಸಲು ಸ್ವ-ಉದ್ಯೋಗ ತರಬೇತಿ ಗಳನ್ನು ಹಮ್ಮಿಕೊಳ್ಳುತ್ತಿದ್ದು ಅದರ ಸಲುವಾಗಿ ನೀಡುವ ತರಬೇತಿಯನ್ನು ಅಚ್ಚುಕಟ್ಟಾಗಿ ನೋಡಿಕೊಂಡು ಮುಂಬರುವ ದಿನಗಳಲ್ಲಿ ನೀವು ನಿಮ್ಮ ಜೀವನದಲ್ಲಿ ಒಂದು ಸ್ವ ಉದ್ಯೋಗ ವಾಗಿ ಪರಿವರ್ತಿಸಿಕೊಳ್ಳಬೇಕು.

ಹಲವಾರು ತರಬೇತಿ ಆಯೋಜನೆ ಮಾಡುತ್ತಿದ್ದು, ಪುರುಷರಿಗೂ ಮತ್ತು ಮಹಿಳೆಯರಿಗೆ ಪೂರಕವಾದ ಉಚಿತ ತರಬೇತಿಗಳನ್ನು ಪಡೆದುಕೊಳ್ಳಿರಿ ಎಂದು ಹೇಳಿದರು.

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಉಪನ್ಯಾಸಕರಾದ ರಾಜೇಶ್ವರಿ ದೇವಲಾಪುರ ಮಾತನಾಡಿ ಅವರು ಸ್ವ ಉದ್ಯೋಗಗಳನ್ನು ಹೇಗೆ ಕೈಗೊಳ್ಳುವುದು, ಎದುರಾಗುವ ಸಮಸ್ಯೆಗಳು, ಸವಾಲುಗಳು, 43 ವಿಧದ ರೀತಿಯ ಸ್ವ ಉದ್ಯೋಗಗಳ ಕುರಿತು ಮಾಹಿತಿ, ಹಾಗೂ ತರಬೇತಿ ಸಂಸ್ಥೆಯಲ್ಲಿ ನೀಡುವಂತಹ ವಿವಿಧ ರೀತಿಯ ಉದ್ಯೋಗಗಳ ತರಬೇತಿ ಕುರಿತು ಮಾಹಿತಿ ನೀಡಿದರು.ಹಾಗೂ ತರಬೇತಿ ಪಡೆದುಕೊಂಡು ಪ್ರತಿ ತರಬೇತಿಯ ಸರ್ಟಿಫಿಕೇಟ್ ಅನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ನಿರೂಪಣೆ ಸೇವಾಪ್ರತಿನಿದಿ ಕುಮಾರಿ ಐಶ್ವರ್ಯ, ಶ್ರೀ ಶೈಲ್ ಚಿನಿವಾಲರ ಸ್ವಾಗತ. ರತ್ನ ವಂದನೆ ಲಕ್ಷ್ಮಿ ನೆರವೇರಿಸಿದರು. ಈ ಸಂದರ್ಭ ಕೇಂದ್ರದ ಸರ್ವ ಸಂಘದ ಸದಸ್ಯರು ಉಪಸ್ಥಿತರಿದ್ದರು.

ವರದಿ: ದುಂಡಪ್ಪ ಹೂಲಿ ಮಲ್ಲಮ್ಮನ ಬೆಳವಡಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ