LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಪ್ರಜಾಸೇವೆ' ಎಂಬ ಪ್ರತ್ಯೇಕ ಇಲಾಖೆ ಸ್ಥಾಪನೆ : ಡಿ. ಕೆ ಶಿವಕುಮಾರ್ ಘೋಷಣೆ 

Advertisement

ಬೆಂಗಳೂರು : ರಾಜ್ಯದ ಜನರು ತಮ್ಮ ಸಮಸ್ಯೆಗಳು, ಬೇಡಿಕೆಗಳು ಹಾಗೂ ದೂರುಗಳನ್ನು ಪರಿಹರಿಸಿಕೊಳ್ಳಲು ಇನ್ನು ಮುಂದೆ ಸರ್ಕಾರಿ ಕಚೇರಿಗಳ ಸುತ್ತ ಅಲೆದಾಡಬೇಕಾಗಿಲ್ಲ. ಜನರ ಅಹವಾಲುಗಳಿಗೆ ತ್ವರಿತ ಸ್ಪಂದನೆ ನೀಡುವ ಉದ್ದೇಶದಿಂದ 'ಪ್ರಜಾಸೇವೆ' ಎಂಬ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.

ಜೊತೆಗೆ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ವಿಶೇಷ ಸಚಿವರನ್ನೂ ನೇಮಿಸಲಾಗುವುದು ಎಂದು ತಿಳಿಸಿದ್ದಾರೆ.ಸಚಿವ ಸಂಪುಟ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. 

ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಬಂದು ಪ್ರತಿಭಟನೆ, ಮನವಿ ಹಾಗೂ ಬೇಡಿಕೆಗಳನ್ನು ಸಲ್ಲಿಸುವ ಜನರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಪ್ರತ್ಯೇಕ ವ್ಯವಸ್ಥೆ ಅಗತ್ಯವಿದೆ ಎಂದು ಅವರು ಹೇಳಿದರು.

ಪ್ರತಿದಿನ ಹಲವಾರು ಸಂಘಟನೆಗಳು ಹಾಗೂ ಸಾರ್ವಜನಿಕರು ತಮ್ಮ ಬೇಡಿಕೆಗಳೊಂದಿಗೆ ಸರ್ಕಾರದ ಗಮನ ಸೆಳೆಯಲು ಬರುತ್ತಾರೆ. ಅವರ ಸಮಸ್ಯೆಗಳು ಕಾನೂನುಬದ್ಧವೇ ಅಥವಾ ಅಲ್ಲವೇ ಎಂಬುದನ್ನು ಪರಿಶೀಲಿಸಿ, ಸಂಬಂಧಿತ ಅಧಿಕಾರಿಗಳ ಮೂಲಕ ಪರಿಹಾರ ಕಂಡುಕೊಳ್ಳಲು 'ಪ್ರಜಾಸೇವೆ' ಇಲಾಖೆ ನೆರವಾಗಲಿದೆ ಎಂದು ಸಿಎಂ ತಿಳಿಸಿದರು.

ಇದೇ ವೇಳೆ ಅಧಿಕಾರಿಗಳಿಗೆ 15 ದಿನಗಳೊಳಗೆ ತಮ್ಮ ಇಲಾಖೆಗಳ ಕಾರ್ಯಯೋಜನೆ ಸಿದ್ಧಪಡಿಸುವಂತೆ ಸೂಚಿಸಿರುವ ಸಿಎಂ, ಯಾವುದೇ ರಾಜಕೀಯ ಅಥವಾ ಇತರೆ ಒತ್ತಡಗಳಿಗೆ ಮಣಿಯದೆ ಕಾನೂನು ಚೌಕಟ್ಟಿನೊಳಗೆ ಕೆಲಸ ಮಾಡುವಂತೆ ನಿರ್ದೇಶನ ನೀಡಿದ್ದಾರೆ. ಸರ್ಕಾರ ಪಾರದರ್ಶಕ, ನ್ಯಾಯಸಮ್ಮತ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಸ್ಪಂದಿಸಿ ನ್ಯಾಯ ದೊರಕಿಸಲು ಈ ಪ್ರಜಾಸೇವೆ ಇಲಾಖೆಯನ್ನು ರಚಿಸಲು ನಿರ್ಧರಿಸಿದ್ದು, ಈ ಹೊಸ ಇಲಾಖೆಯಲ್ಲಿ ಪ್ರತ್ಯೇಕವಾಗಿ ಸಚಿವರು ಹಾಗೂ IAS ಅಧಿಕಾರಿಗಳು ಇರಲಿದ್ದಾರೆ.

ಸಚಿವರು ಎಲ್ಲಾ ೨೨೪ ಕ್ಷೇತ್ರಗಳಿಗೂ ಹೋಗಿ ಶಾಸಕರ ಜತೆ ಸಭೆ ನಡೆಸಿ ಜನರ ಅಹವಾಲುಗಳನ್ನು ಆಲಿಸಿ ನ್ಯಾಯ ದೊರಕಿಸುವ ಕೆಲಸ ಮಾಡಲಿದ್ದಾರೆ. 

ವಾರಕ್ಕೊಮ್ಮೆ ಕಡ್ಡಾಯವಾಗಿ ಶಾಸಕರ ಜತೆಗೂಡಿ ಜನಸ್ಪಂದನ ಸಭೆ ನಡೆಸಿ ಅಲ್ಲಿನ ಅಭಿಪ್ರಾಯಗಳನ್ನು ನಮಗೆ ತಲಪಿಸುತ್ತಾರೆ ಎಂದರು.

ಜನರ ಸಮಸ್ಯೆಗಳಿಗೆ ವೇಗವಾಗಿ ಸ್ಪಂದಿಸಿ, ಆಡಳಿತವನ್ನು ಇನ್ನಷ್ಟು ಜನಸ್ನೇಹಿಯಾಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ 'ಪ್ರಜಾಸೇವೆ' ಇಲಾಖೆಯನ್ನು ಆರಂಭಿಸುತ್ತಿದೆ.

ಈ ಹೊಸ ವ್ಯವಸ್ಥೆ ಜಾರಿಗೆ ಬಂದರೆ ಸಾರ್ವಜನಿಕರ ದೂರುಗಳು ಮತ್ತು ಬೇಡಿಕೆಗಳಿಗೆ ಒಂದೇ ವೇದಿಕೆಯಲ್ಲಿ ಪರಿಹಾರ ದೊರೆಯುವ ನಿರೀಕ್ಷೆ ಮೂಡಿದೆ.

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ