Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆರಗ ಸರ್ಸೆ ಅಶ್ಲೀಲತೆ ಹಾಡು : ಹಾಡು ನಿಷೇಧಿಸಿದ ಕೇಂದ್ರ ಸರ್ಕಾರ

Advertisement
ಬೆಂಗಳೂರು: ಸ್ಯಾಂಡಲ್‌ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ, ನಿರ್ದೇಶಕ ಪ್ರೇಮ್ ಸಾರಥ್ಯದ ಬಹುನಿರೀಕ್ಷಿತ 'ಕೆಡಿ: ದಿ ಡೆವಿಲ್' ಚಿತ್ರಕ್ಕೆ ಈಗ ದೊಡ್ಡ ವಿಘ್ನ ಎದುರಾಗಿದೆ.

ಚಿತ್ರದ ಮೊದಲ ಹಾಡು 'ಸರ್ಕೆ ಚುನಾರ್' (ಕನ್ನಡದಲ್ಲಿ ಸರ್ಸೆ ಸೆರಗ ಸರ್ಸೆ) ಅತಿಯಾದ ಅಶ್ಲೀಲತೆ ಹಾಗೂ ದ್ವಂದ್ವಾರ್ಥದ ಸಾಹಿತ್ಯದಿಂದ ಕೂಡಿದೆ ಎಂಬ ಆಕ್ರೋಶಕ್ಕೆ ಮಣಿದಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು, ಸಭ್ಯತೆಯ ಮಾನದಂಡಗಳನ್ನು ಉಲ್ಲಂಘಿಸಿದರೆ ಈ ಹಾಡನ್ನು ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ ಕೂಡಲೇ ತೆಗೆದುಹಾಕುವಂತೆ ಸೆನ್ಸಾರ್ ಮಂಡಳಿಗೆ (CBFC) ಕಟ್ಟುನಿಟ್ಟಿನ ಆದೇಶ ನೀಡಿದೆ.

ನೋರಾ ಫತೇಹಿ ಅವರ ಮಾದಕ ನೃತ್ಯ ಹಾಗೂ ಸಂಜಯ್ ದತ್ ಕಾಣಿಸಿಕೊಂಡಿರುವ ಈ ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಪರ-ವಿರೋಧದ ಚರ್ಚೆಗೆ ನಾಂದಿ ಹಾಡಿತ್ತು.

ಅಶ್ಲೀಲತೆಯ ಆರೋಪ: ಹಾಡಿನ ಸಾಹಿತ್ಯ ಮತ್ತು ನೃತ್ಯ ಸಂಯೋಜನೆಯು ಸಭ್ಯತೆಯ ಗೆರೆ ದಾಟಿದೆ ಎಂದು ಸಾರ್ವಜನಿಕರು ದೂರಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ: ಮಂಗ್ಲಿ ಧ್ವನಿಯ ಈ ಹಾಡು ವೈರಲ್ ಆಗುತ್ತಿದ್ದಂತೆ, ಇದು ಕುಟುಂಬ ಸಮೇತ ನೋಡಲು ಯೋಗ್ಯವಾಗಿಲ್ಲ ಎಂಬ ದೂರುಗಳ ಸುರಿಮಳೆಯೇ ಹರಿದುಬಂದಿತ್ತು.

ಕೇಂದ್ರ ಸರ್ಕಾರದ ಹಸ್ತಕ್ಷೇಪ

ಸಾಮಾನ್ಯವಾಗಿ ಸಿನಿಮಾ ವಿಚಾರಗಳಲ್ಲಿ ಕೇಂದ್ರ ಸಚಿವಾಲಯ ನೇರವಾಗಿ ತಲೆಹಾಕುವುದು ಕಡಿಮೆ. ಆದರೆ, ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ (AICWA) ನೀಡಿದ ದೂರು ಮತ್ತು ರಾಷ್ಟ್ರಮಟ್ಟದಲ್ಲಿ ವ್ಯಕ್ತವಾದ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

"ಸಾರ್ವಜನಿಕ ನೈತಿಕತೆ ಮತ್ತು ಸಭ್ಯತೆಯ ಮಾನದಂಡಗಳನ್ನು ಉಲ್ಲಂಘಿಸುವ ಯಾವುದೇ ಅಂಶಗಳನ್ನು ಸಹಿಸುವುದಿಲ್ಲ. ಸಭ್ಯತೆಯ ಮಾನದಂಡಗಳನ್ನು ಉಲ್ಲಂಘಿಸಿದರೆ ಕೂಡಲೇ ಯೂಟ್ಯೂಬ್ ಸೇರಿದಂತೆ ಎಲ್ಲಾ ಡಿಜಿಟಲ್ ಮಾಧ್ಯಮಗಳಿಂದ ಈ ಹಾಡನ್ನು ಸ್ಕ್ರಬ್ (Scrub) ಮಾಡಬೇಕು," ಎಂದು ಸಚಿವಾಲಯವು ನಿರ್ದೇಶನ ನೀಡಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
4.1 ಕೋಟಿ ಮಕ್ಕಳಲ್ಲಿ ಬೋಜು : ಜಗತ್ತಿನಲ್ಲೇ ಭಾರತಕ್ಕೆ 2ನೇ ಸ್ಥಾನಪ್ರಶ್ನೆ ಪತ್ರಿಕೆ ಸೋರಿಕೆಗೆ ಕಠಿಣ ಕಾನೂನುಗಳು ಜಾರಿಗೆ : ತಡರಾತ್ರಿ ಮೋದಿ ಘೋಷಣೆ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್‌ಚುಕ್ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ