LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್

Advertisement

ಬೆಂಗಳೂರು: "ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ.

ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

"ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ.ಅವರಿಗೆ ಧನ್ಯವಾದ ಅರ್ಪಿಸುತ್ತೇನೆ.

ಹೊರಟ್ಟಿ ಅವರು ದೇಶದ ವಿಧಾನ ಪರಿಷತ್ ಇತಿಹಾಸದಲ್ಲೇ ಅತ್ಯಂತ ಹಿರಿಯ ನಾಯಕರು. ಅವರು ತಮ್ಮ ಹೃದಯ ವೈಶಾಲ್ಯತೆ ತೋರಿದ್ದಾರೆ. 

ಅದು ಮೆಚ್ಚುವಂತದ್ದು. ಆಗಸ್ಟ್ 13 ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, 14 ರಂದು ನೂತನ ಉಪಸಭಾಪತಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ನಂತರ ಉಪಸಭಾಪತಿಗಳ ಮೂಲಕ ಸಭಾಪತಿಗಳ ಚುನಾವಣೆ ನಡೆಯಲಿದೆ" ಎಂದು ತಿಳಿಸಿದರು.

ಇದಕ್ಕೂ ಮುನ್ನ ಬಸವರಾಜ ಹೊರಟ್ಟಿ ಅವರೊಂದಿಗೆ ವಿಧಾನಸೌಧದಲ್ಲಿ ಚರ್ಚೆ ನಡೆಸಿದ್ದ ಶಿವಕುಮಾರ್ ಅವರು, "ವಿಧಾನ ಪರಿಷತ್ತಿನ ಅಧ್ಯಕ್ಷ, ಉಪಾಧ್ಯಕ್ಷರನ್ನ ಆಯ್ಕೆ ಮಾಡಿ ನಂತರ ನಮ್ಮ ಸದಸ್ಯರೆಲ್ಲರಿಗೂ ಕೃತಜ್ಞತೆ ಸಲ್ಲಿಸುವ ಆಸೆಯನ್ನು ಬಸವರಾಜ ಹೊರಟ್ಟಿಯವರು ಇಟ್ಟುಕೊಂಡಿದ್ದಾರೆ. ಅವರ ಭಾವನೆಗಳನ್ನು ನಾವು ಒಪ್ಪಿಕೊಂಡಿದ್ದೇವೆ, ಗೌರವಿಸುತ್ತೇವೆ" ಎಂದರು.

ಹೊರಟ್ಟಿ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಚಾರ ಇತ್ತಲ್ಲ ಎಂದು ಕೇಳಿದಾಗ, "ನಾವುಗಳೇ ಒಂದು ಒಪ್ಪಂದಕ್ಕೆ ಬಂದ ಮೇಲೆ ಮುಂದೇನಿದೆ? ಅವಿಶ್ವಾಸ ನಿರ್ಣಯ ಮಂಡನೆ ಅಪ್ರಸ್ತುತ. ಈಗ ಅವರೇ ರಾಜೀನಾಮೆ ನೀಡಿದ್ದಾರೆ. ಈಗ ರಾಜೀನಾಮೆ ಅಂಗೀಕರಿಸಿದರೂ ಅವರನ್ನೇ ಹಂಗಾಮಿ‌ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕಿದೆ" ಎಂದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ