ಯಾದಗಿರಿ : ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಾಮುಕ ಸ್ವಾಮೀಜಿಯನ್ನು ಅರೆಸ್ಟ್ ಮಾಡಲಾಗಿದೆ. ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ ಅಣ್ಣಪ್ಪ ಸ್ವಾಮೀಜಿಯನ್ನು ಬಂಧಿಸಲಾಗಿದೆ.
ಯಾದಗಿರಿ ಮಹಿಳಾ ಠಾಣ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು ಭಾಗ್ಯವಂತಿ ದೇವರ ಹೆಸರಿನಲ್ಲಿ ಅಣ್ಣಪ್ಪ ಸ್ವಾಮಿ ಮಠ ನಡೆಸುತ್ತಿದ್ದ ಎನ್ನಲಾಗಿದೆ.
ಹಾಗಾಗಿ ಮಠದಲ್ಲಿ ಇಬ್ಬರು ಸಹೋದರಿಯರನ್ನು ಸ್ವಾಮೀಜಿ ಇರಿಸಿಕೊಂಡಿದ್ದ. 16 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸೆಗಿದ ಆರೋಪ ಕೇಳಿ ಬಂದಿದೆ. ಸದ್ಯ ಪ್ರಕರಣ ದಾಖಲಿಸಿ ಸ್ವಾಮೀಜಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.


