Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

Advertisement
ಮೈಸೂರುಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಅನುದಾನಿತ ಪ್ರೌಢಶಾಲೆಯ ಶಿಕ್ಷಕನೋರ್ವನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಶಿವಮೂರ್ತಿ ಬಂಧಿತ ಶಿಕ್ಷಕ.

ಘಟನೆ ನಡೆದರೂ ಇಲಾಖೆಯ ಗಮನಕ್ಕೆ ತರದ ಹಾಗೂ ತಡ ಮಾಡಿದ ಆರೋಪದಲ್ಲಿ ಶಾಲಾ ಮುಖ್ಯ ಶಿಕ್ಷಕನ ವಿರುದ್ದವೂ ಪ್ರಕರಣ ದಾಖಲಾಗಿದೆ. ಶಿಕ್ಷಕ ಶಿವಮೂರ್ತಿ 20 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ವಿದ್ಯಾರ್ಥಿನಿಯರೇ ಶಾಲಾ ಮುಖ್ಯ ಶಿಕ್ಷಕರ ಗಮನಕ್ಕೆ ತಂದಿದ್ದು, ಈ ಸಂಬಂಧ ದೂರು ದಾಖಲಿಸಿಕೊಂಡು ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿಯರು ಮಹಿಳಾ ಶಿಕ್ಷಕಿಯ ಮೂಲಕ ಲೈಂಗಿಕ ಕಿರುಕುಳದ ಬಗ್ಗೆ ಮಾಹಿತಿ ನೀಡಿದ್ದರೂ, ಶಾಲೆಯ ಮುಖ್ಯ ಶಿಕ್ಷಕ ಕ್ರಮ ತೆಗೆದುಕೊಳ್ಳದೇ ಸುಮ್ಮನಿದ್ದ ಕಾರಣ ಅವರ ವಿರುದ್ಧವೂ ದೂರು ದಾಖಲಾಗಿದೆ.

ಕಿರುಕುಳಕ್ಕೆ ಒಳಾಗದ ವಿದ್ಯಾರ್ಥಿನಿಯರು ಮಕ್ಕಳ ಸಹಾಯವಾಣಿ ಮೂಲಕ ಈ ವಿಚಾರ ತಿಳಿಸಿದ್ದು, ತಕ್ಷಣ ಮಕ್ಕಳ ಸಹಾಯವಾಣಿ ಅಧಿಕಾರಿಗಳು ಡಿಡಿಪಿಐಗೆ ವಿಚಾರ ತಿಳಿಸಿದ್ದಾರೆ. ಡಿಡಿಪಿಐ ಜವರೇಗೌಡ ಅವರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ರೇವಣ್ಣ ಅವರಿಗೆ ಮಾಹಿತಿ ನೀಡಿದ್ದು, ಅವರು ಪರಿಶೀಲನೆ ನಡೆಸಿ ವಿಜಯನಗರ ಪೊಲೀಸ್​ ಠಾಣಾಗೆ ತೆರಳಿ ಶಿಕ್ಷಕ ಶಿವಮೂರ್ತಿ ಹಾಗೂ ಮುಖ್ಯ ಶಿಕ್ಷಕನ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಈ ದೂರಿನನ್ವಯ ಕೂಲಂಕಷ ತನಿಖೆ ನಡೆಸಲಾಗಿದ್ದು, ಶಿಕ್ಷಕ ಶಿವಮೂರ್ತಿತನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ