
ಕಾಲೇಜಿನ ಕ್ಯಾಂಪಸ್ ನಲ್ಲಿ ಸ್ವತಃ ಕಾಂಗ್ರೆಸ್ಸಿನ ಕಾರ್ಪೋರೆಟರ್ ಮಗಳಿಗೆ ನ್ಯಾಯ ಕೊಡಿಸಲು ಆಗದ ಈ ಸರ್ಕಾರ ಇನ್ನೂ ಕೋಟ್ಯಾಂತರ ಕನ್ನಡಿಗರಿಗೆ ರಕ್ಷಣೆ ಕೊಡುತ್ತಾರೆಂದು ಏನೂ ಗ್ಯಾರಂಟಿ ?ನೇಹಾ ಹತ್ಯೆ ಮಾಡಿದ ಕೊಲೆಗಾರನಿಗೆ ಉಗ್ರ ಶಿಕ್ಷೆಯಾಗಬೇಕು. ಹಾಡುಹಗಲೇ ಕೊಲೆ ನಡೆದರೂ ಕಣ್ಣು ಮುಚ್ಚಿ ಕುಳಿತಿರುವ ಸರ್ಕಾರದ ನಡೆಯನ್ನು ರಾಜ್ಯದ ಜನತೆ ತೀವ್ರವಾಗಿ ಖಂಡಿಸಿದ್ದಾರೆ.

ಪ್ರಕರಣದ ದಾರಿ ತಪ್ಪಿಸಿ ಅಪರಾಧಿಯನ್ನು ರಕ್ಷಣೆಗೆ ನಿಂತರೆ ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ, ಶಾಸಕರಾದ ಶ್ರೀ ದುರ್ಯೋಧನ ಐಹೊಳೆ, ಶ್ರೀ ಪಿ.ಎಚ್.ಪೂಜಾರ, ಶ್ರೀ ಬಸವರಾಜ ಹುಂದ್ರಿ,ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಎ.ಬಿ.ವಿ.ಪಿ ವಿದ್ಯಾರ್ಥಿಗಳು ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ ರಾಜು ಮುಂಡೆ

