Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟಿದ್ದ 'ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ' ಅರೆಸ್ಟ್

Advertisement
ಕಲಬುರಗಿ : ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟಿದ್ದ 'ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ' ಯನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಸ್ವಾಮೀಜಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಕ್ತರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಪೊಲೀಸರು ಸ್ವಾಮೀಜಿಯನ್ನ ಬಂಧಿಸಿದ್ದಾರೆ.

ಸ್ವಾಮೀಜಿಯೊಬ್ಬರು ಮಠದ ಆವರಣದಲ್ಲಿ ನಿಂತು ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿತ್ತು. ಈ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು. ಕಲಬುರಗಿ ಜಿಲ್ಲೆಯ ಉಡಚಣ ಗ್ರಾಮದ ಹಿರೇಮಠದ ಶಾಂತಲಿಂಗ ಸ್ವಾಮೀಜಿ ಮಠದ ಆವರಣದಲ್ಲಿ ನಿಂತು ಗಾಳಿಯಲ್ಲಿ ಗುಂಡು ಹೊಡೆದಿರುವ ವಿಡಿಯೋ ವೈರಲ್ ಆಗಿತ್ತು. ಈ ಬೆನ್ನಲ್ಲೇ ಅವರ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೆಲ ದಿನಗಳ ಹಿಂದೆ ಶಾಂತಲಿಂಗ ಸ್ವಾಮೀಜಿ ಕುಡಿದು ಮಠದಲ್ಲಿ ರಂಪಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು, ಭಕ್ತರು ಅವರನ್ನು ಮಠದಿಂದ ಹೊರಹಾಕಿದ್ದರು.

ಹೊಸ ಪೀಠಾಧಿಪತಿಗಳ ನೇಮಕ ಮಾಡುವ ಬಗ್ಗೆ ಚರ್ಚೆ ನಡೆದಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಶಾಂತಲಿಂಗ ಸ್ವಾಮೀಜಿ ವಾರದ ಹಿಂದಷ್ಟೇ ಮಠದಲ್ಲಿ ಮತ್ತೆ ಪ್ರತ್ಯಕ್ಷರಾಗಿದ್ದರು. ನಂತರ ಏಕಾಏಕಿ ಮಠದ ಆವರಣದಲ್ಲಿ ನಿಂತು ಗುಂಡು ಹಾರಿಸಿದ್ದರು.

ವಿರೋಧಿಗಳನ್ನು ಹೆದರಿಸುವ ನಿಟ್ಟಿನಲ್ಲಿ ಸ್ವಾಮೀಜಿ ಗಾಳಿಯಲ್ಲಿ ಗುಂಡು ಹೊಡೆದು ಬಿಲ್ಡಪ್ ತೆಗೆದುಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು.. ಅದೇನೇ ಇದ್ದರೂ ಸ್ವಾಮೀಜಿಯಾಗಿದ್ದವರು ಮದ್ಯಪಾನ ಮಾಡಿ ಗಲಾಟೆ ಮಾಡಿದ್ದೂ ಅಲ್ಲದೇ, ಬಂದೂಕು ಕೈಯಲ್ಲಿ ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿ ಬೆದರಿಸುವ ಕೆಲಸ ಮಾಡುತ್ತಿರುವ ಸ್ವಾಮೀಜಿಗಳ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ