Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೌಚಾಲಯದ ಬಾಗಿಲುಗಳಿಗೆ ಶಿವಾಜಿ ಮಹಾರಾಜ್, ರಾಣಿ ಪದ್ಮಿನಿ ಭಾವಚಿತ್ರ : ಆಕ್ರೋಶ 

Advertisement
ಹರಿಯಾಣ: ಮರಾಠಾ ಸಾಮ್ರಾಜ್ಯ ಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜ್ ಹಾಗೂ ಸಾಹಸಿ ಮಹಿಳೆ ರಾಣಿ ಪದ್ಮಿನಿ ಅವರ ಭಾವಚಿತ್ರಗಳನ್ನು ಶೌಚಾಲಯದ ಬಾಗಿಲುಗಳಿಗೆ ಅಳವಡಿಸಿ ಅವಮಾನಿಸಿರುವ ಘಟನೆ ನಡೆದಿದೆ.

ಹರಿಯಾಣದ ಸಿಕ್ರಿಯಲ್ಲಿರುವ 'ಮಿಲನ್ ಬ್ಯಾಂಕ್ವೆಟ್ ಹಾಲ್'ನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಹಾಗೂ ರಾನಿ ಪದ್ಮಿನಿ ಭಾವಚಿತ್ರಗಳನ್ನು ಶೌಚಾಲಯದ ಬಾಗಿಲಿಗೆ ಹಾಕಲಾಗಿದ್ದು, ಹಿಂದೂ ಸಂಘಟನೆಗಳು ಮತ್ತು ಇತಿಹಾಸಕಾರರ ಕೆಂಗಣ್ಣಿಗೆ ಗುರಿಯಾಗಿದೆ.

ಮದುವೆ ಸಮಾರಂಭ ನಡೆಯುವ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶೌಚಾಲಯದ ಬಾಗಿಲುಗಳ ಮೇಲೆ ಪುರುಷ ಮತ್ತು ಮಹಿಳಾ ವಿಭಾಗವನ್ನು ಗುರುತಿಸಲು ಶಿವಾಜಿ ಮಹಾರಾಜ್ ಮತ್ತು ಮಹಾರಾಣಿ ಪದ್ಮಿನಿ ಅವರ ಭಾವಚಿತ್ರಗಳನ್ನು ಬಳಸಲಾಗಿದೆ. ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ, ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಇದು ಭಾರತೀಯ ಇತಿಹಾಸ ಮತ್ತು ಹಿಂದುತ್ವದ ಆಸ್ಮಿತೆಗೆ ಮಾಡಿದ ಅವಮಾನ ಹಾಗೂ ಅಪಚಾರ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. "ನಮ್ಮ ಇತಿಹಾಸದ ವೀರ ಪುರುಷರು ಮತ್ತು ಮಹಿಳೆಯರು ನಮಗೆ ಪೂಜನೀಯರು. ಅವರನ್ನು ಶೌಚಾಲಯದ ಬಾಗಿಲಿಗೆ ಬಳಸುವುದು ಅಕ್ಷಮ್ಯ ಅಪರಾಧ," ಎಂದು ನೆಟ್ಟಿಗರು ಟೀಕಿಸಿದ್ದಾರೆ. ತಕ್ಷಣ ಈ ಬಗ್ಗೆ ಕ್ರಮ ಕೈಗೊಂಡು ಅವುಗಳನ್ನು ತೆಗೆಯುವಂತೆ ಒತ್ತಾಯಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ