ಬೆಳಗಾವಿಯ ಶಿವಂ ಅಸೋಸಿಯೇಟ್ ವಂಚನೆ ಪ್ರಕರಣದ ಪ್ರಮುಖ ಆರೋಪಿ ಶಿವಾನಂದ ನೀಲಣ್ಣವರ ಬೆಂಗಳೂರಿನ ನ್ಯಾಯಾಲಯದಿಂದ ಮಧ್ಯಂತರ ಜಾಮೀನು (Bail) ಪಡೆದು ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕಠಿಣ ಷರತ್ತುಗಳ ಅಡಿಯಲ್ಲಿ ತನಿಖೆಯನ್ನು ಎದುರಿಸಲಿದ್ದಾರೆ.
ಬೆಳಗಾವಿ ವಂಚನೆ ಪ್ರಕರಣಕ್ಕೆ (Belagavi Fraud Case) ಸಂಬಂಧಿಸಿದಂತೆ ರಾಜ್ಯಾದ್ಯಂತ ಸದ್ದು ಮಾಡಿದ್ದ ಬೆಳಗಾವಿಯ 'ಶಿವಂ ಅಸೋಸಿಯೇಟ್' (shivam associates) ವಂಚನೆ ಪ್ರಕರಣದ ಮುಖ್ಯ ಆರೋಪಿ ಶಿವಾನಂದ ನೀಲಣ್ಣವರ (shivanand neelannavar) ಕೊನೆಗೂ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಈ ಬಿಡುಗಡೆ ನಡೆದಿದೆ.
ಹೂಡಿಕೆದಾರರಿಗೆ ವಂಚಿಸಿದ ಆರೋಪದ ಮೇಲೆ ಶಿವಾನಂದ ನೀಲಣ್ಣವರ ಅವರನ್ನು ಮೇ 15 ರಂದು ಬೆಳಗಾವಿಯ ಮಾಳಮಾರುತಿ ಪೊಲೀಸರು ಬಂಧಿಸಿದ್ದರು. ಅಂದಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಇವರು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದರು.
ಈ ನಡುವೆ ಜಾಮೀನಿಗಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ಬೆಂಗಳೂರಿನ 92ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್, ಜೂನ್ 12 ರಂದು ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿತ್ತು.


