LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

KPSC ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಮರು ಆಯ್ಕೆ : ಹೈಕೋರ್ಟ್ ಆದೇಶ 

Advertisement

ಬೆಂಗಳೂರು: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. 

ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸ ಹಾಗೂ ಕೆಪಿಎಸ್‌ಸಿ ಕಚೇರಿ ಸೇರಿದಂತೆ ಒಟ್ಟು 21 ಕಡೆಗಳಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ ಬೆನ್ನಲ್ಲೇ ಈ ಕಾನೂನು ಸಮರ ತೀವ್ರಗೊಂಡಿತ್ತು.

ಈ ಹಿಂದೆ ಜುಲೈ 10ರಂದು ರಾಜ್ಯಪಾಲರು ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು.

ಆದರೆ, ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ, ರಾಜ್ಯಪಾಲರ ಅಮಾನತು ಆದೇಶ ಕಾನೂನುಬಾಹಿರ ಎಂದು ತೀರ್ಪು ನೀಡಿದೆ.

 ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನ ಮತ್ತು ಶಿಫಾರಸನ್ನು ಮಾತ್ರ ಅನುಸರಿಸಬೇಕು. ಈ ಪ್ರಕರಣದಲ್ಲಿ ಸಂಪುಟದ ಸಲಹೆ ಇರಲಿಲ್ಲ ಎಂಬ ಕಾರಣಕ್ಕೆ ಈ ರದ್ದತಿ ಆದೇಶ ಹೊರಬಿದ್ದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್