Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಯಿಯನ್ನು ನೋಡಿಕೊಳ್ಳದ ಮಗಳಿಗೆ ಶಾಕ್ : ಆಸ್ತಿ ವಾಪಸ್ ನೀಡುವಂತೆ ಹೈಕೋರ್ಟ್ ಆದೇಶ 

Advertisement

ಬೆಂಗಳೂರು: ತಾಯಿಯನ್ನು ನೋಡಿಕೊಳ್ಳುವುದು ಕೇವಲ ಸಾಮಾಜಿಕ ಅಥವಾ ನೈತಿಕ ಜವಾಬ್ದಾರಿಯಲ್ಲ, ಅದು ಕಾನೂನುಬದ್ಧ ಹೊಣೆಗಾರಿಕೆಯೂ ಹೌದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. 

ವಯಸ್ಸಾದ ಕಾಲದಲ್ಲಿ ತಾಯಿಯನ್ನು ಕಡೆಗಣಿಸಿದ ಮಗಳ ನಡೆಯನ್ನು ತೀವ್ರವಾಗಿ ಖಂಡಿಸಿರುವ ನ್ಯಾಯಾಲಯ, ಮಗಳ ಹೆಸರಿಗೆ ವರ್ಗಾವಣೆಯಾಗಿದ್ದ ಆಸ್ತಿಯನ್ನು ಮರಳಿ ತಾಯಿಗೆ ನೀಡುವಂತೆ ಆದೇಶಿಸಿದೆ.

ಸುಮಾರು 62 ವರ್ಷದ ನಿವೃತ್ತ ಸರ್ಕಾರಿ ಶಾಲಾ ಶಿಕ್ಷಕಿ ಹೇಮಾ ಅವರು ತಾವು ಕಷ್ಟಪಟ್ಟು ಸಂಪಾದಿಸಿದ್ದ ಆಸ್ತಿಯನ್ನು, ವೃದ್ಧಾಪ್ಯದಲ್ಲಿ ಮಗಳು ಆರ್. ಪವಿತ್ರಾ ಮತ್ತು ಮಗ ಆರ್. ವೇಣುಗೋಪಾಲ್ ತಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ ಎಂಬ ನಂಬಿಕೆಯಿಂದ ಅವರ ಹೆಸರಿಗೆ ದಾನಪತ್ರದ ಮೂಲಕ ವರ್ಗಾಯಿಸಿದ್ದರು.

ಆದರೆ, ಆಸ್ತಿ ಕೈ ಸೇರಿದ ಮೇಲೆ ಮಕ್ಕಳು ತಾಯಿಯನ್ನು ಸರಿಯಾಗಿ ನೋಡಿಕೊಳ್ಳದೆ ಆಕೆಯನ್ನು ಬಾಡಿಗೆ ಮನೆಯಲ್ಲಿ ಇರುವಂತೆ ಮಾಡಿದ್ದರು. ಅಲ್ಲದೆ ಆಕೆಗೆ ಮಾನಸಿಕ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ. 

ಇದರಿಂದ ನೊಂದ ತಾಯಿ, 'ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ-2007'ರ ಅಡಿಯಲ್ಲಿ ತಮಗೆ ನ್ಯಾಯ ಕೊಡಿಸುವಂತೆ ಹಿರಿಯ ನಾಗರಿಕರ ನಿರ್ವಹಣಾ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರ ಪೀಠವು ,ತಾಯಿಯನ್ನು ಕಡೆಗಣಿಸಿದ ಕಾರಣ, ಮಕ್ಕಳಿಗೆ ಮಾಡಿಕೊಡಲಾಗಿದ್ದ ದಾನಪತ್ರವನ್ನು ರದ್ದುಗೊಳಿಸಿ ಆಸ್ತಿಯನ್ನು ಮರಳಿ ತಾಯಿಯ ಹೆಸರಿಗೆ ನೋಂದಣಿ ಮಾಡಿಕೊಡುವ ನ್ಯಾಯಮಂಡಳಿಯ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿಯಿಂದ ಮಕ್ಕಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ದಾನಪತ್ರದಲ್ಲಿ 'ನೋಡಿಕೊಳ್ಳಬೇಕು' ಎಂದು ಸ್ಪಷ್ಟವಾಗಿ ಬರೆಯದಿದ್ದರೂ, ಆಸ್ತಿ ನೀಡುವ ಹಿಂದೆ ಅಂತಹದೊಂದು ನಂಬಿಕೆ ಇರುತ್ತದೆ ಎಂಬುದು ಕಾನೂನಿನ ಆಶಯ" ಎಂದು ನ್ಯಾಯಾಲಯ ಹೇಳಿದೆ.

ಸ್ವಂತ ಮನೆಯಿದ್ದರೂ ವೃದ್ಧ ತಾಯಿಯನ್ನು ಬಾಡಿಗೆ ಮನೆಯಲ್ಲಿ ಇರುವಂತೆ ಮಾಡಿರುವುದು ಮಕ್ಕಳ ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದು ಪೀಠವು ತರಾಟೆಗೆ ತೆಗೆದುಕೊಂಡಿದೆ. 

ತಾಂತ್ರಿಕ ಕಾರಣಗಳನ್ನು ನೀಡಿ ಹಿರಿಯ ನಾಗರಿಕರ ಕಾಯ್ದೆಯ ಮೂಲ ಉದ್ದೇಶವನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ಹೈಕೋರ್ಟ್, ಮಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಸಂಕಷ್ಟದಲ್ಲಿರುವ ಹಿರಿಯ ನಾಗರಿಕರಿಗೆ ಕಾನೂನು ಶ್ರೀರಕ್ಷೆಯಾಗಿ ನಿಂತಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST