Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿ. ಖಾತಾ ನೀಡಲು 10% ಲಂಚ ಕೊಡಬೇಕು

Advertisement
ಸೇಡಂ : ಪುರಸಭೆಯ ವ್ಯಾಪ್ತಿಯಲ್ಲಿ ಬಿ. ಖಾತಾ ಪಡೆಯಬೇಕಾದರೆ 10% ಲಂಚ ನೀಡಬೇಕಾದಂತಹ ಪರಿಸ್ಥಿತಿ ಕಲಬುರಗಿ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಶಿವಕುಮಾರ ಅಪ್ಪಾಜಿ ಗಂಭೀರ ಆರೋಪ ಮಾಡಿದ್ದಾರೆ.
ಇತ್ತೀಚೆಗೆ ಸರಕಾರ ಎ ಮತ್ತು ಬಿ (ಈ-ಖಾತಾ) ಖಾತಾ ನೀಡಲು ಸೂಚಿಸಿತ್ತು. ಅದರಂತೆ ಸಾವಿರಾರು ಜನ ಈ ಖಾತಾಗಳಿಗಾಗಿ ಅರ್ಜಿ ಸಲ್ಲಿಸಿದ್ದರು. ಕೆಲ ಮಾನದಂಡಗಳ ಪ್ರಕಾರ ಈ ಖಾತಾ ಪುರಸಭೆ ವತಿಯಿಂದ ನೀಡಲಾಗಿದೆ.

ಆದರೆ ಸೇಡಂ ಪುರಸಭೆಯಲ್ಲಿ ಮಾನದಂಡಗಳನ್ನು ಬದಿಗೊತ್ತಿ ಲಂಚ ನೀಡಿದವರಿಗೆ ಮಾತ್ರವೇ ಈ ಖಾತಾ ನೀಡಲಾಗಿದೆ ಎಂಬ ಅನುಮಾನ ಮೂಡಿದೆ. ಕೆಲ ಸರ್ವೆ ನಂಬರಗಳಲ್ಲಿನ ವಿಭಜಿತ ಗುಂಟಾ ಜಮೀನುಗಳ ಕೆಲ ಮಾಲೀಕರಿಗೆ ಈ ಖಾತಾ ನೀಡಿ, ಇನ್ನುಳಿದ ಕೆಲವರಿಗೆ ನೀಡದೆ ನಿರಾಕರಿಸಲಾಗುತ್ತಿದೆ. ಇದರಲ್ಲಿ ನೇರವಾಗಿ ಪುರಸಭೆ ಮುಖ್ಯಾಧಿಕಾರಿ ಶರಣಯ್ಯಸ್ವಾಮಿ ಹಾಗೂ ಆರ್.ಒ ಸೇರಿದಂತೆ ಅನೇಕ ಅಧಿಕಾರಿಗಳು ಶಾಮೀಲಾಗಿದ್ದು, ದುಡ್ಡು ಕೊಟ್ಟವರಿಗೆ ಮಾತ್ರ ಈ ಖಾತಾ ‌ನೀಡಿ, ಸರಕಾರದ ಮಾನದಂಡಗಳನ್ನ ಮೂಲೆಗುಂಪು ಮಾಡಿ ಮೋಸ ಎಸಗುತ್ತಿದ್ದಾರೆ.

ಅಲ್ಲದೆ ಲಕ್ಷಾಂತರ ರೂಪಾಯಿ ಲಂಚ ಪಡೆದು ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಸರಕಾರ ತನ್ನ ಬೊಕ್ಕಸ ತುಂಬಿಕೊಳ್ಳಲು ಈ ಖಾತಾ ಜಾರಿ ಮಾಡಿದೆ ಆದರೆ ಇಲ್ಲಿ ಅಧಿಕಾರಿಗಳ ಬೊಕ್ಕಸ ತುಂಬುತ್ತಿದೆ. ಈ ಕುರಿತು ಉನ್ನತ ಮಟ್ಟದ ತನಿಖೆಯ ಅವಶ್ಯಕತೆ ಇದೆ. ಕೂಡಲೇ ಪೌರಾಢಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತನಿಖೆಗೆ ಆದೇಶಿಸಬೇಕು. ಸಂಬಂಧಿಸಿದ ಅಧಿಕಾರಿಗಳೆಲ್ಲರನ್ನೂ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಖರ್ಗೆ ಉಸ್ತುವಾರಿ: ಕಲಬುರಗಿ ಜಿಲ್ಲೆಯ ಉಸ್ತುವಾರಿ ಹೊತ್ತ ಪ್ರಿಯಾಂಕ ಖರ್ಗೆ ಅವರ ಜಿಲ್ಲೆಯಲ್ಲೇ ಇಂತಹ ಭ್ರಷ್ಟಾಚಾರ ನಡೆಯುತ್ತಿದೆ. ಅಷ್ಟೇ ಅಲ್ಲ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಪ್ರತಿನಿಧಿಸುವ ತವರು ಕ್ಷೇತ್ರ ಇದಾಗಿದೆ. ಲಂಚ ಕೊಟ್ಟವರ ಕಣ್ಣಿಗೆ ತುಪ್ಪ, ಕೊಡದವರ ಕಣ್ಣಿಗೆ ಬೆಣ್ಣೆ ಸವರುವ ಅಧಿಕಾರಿಗಳಿಂದ ಸಾರ್ವಜನಿಕರು ಪರದಾಡುವಂತಾಗಿದೆ.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ