LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಿರಿಗೇರಿಯಲ್ಲಿ ಅದ್ದೂರಿಯಾಗಿ ಜರುಗಿದ ಶ್ರೀ ನಾಗನಾಥೇಶ್ವರ ಮಹಾ ರಥೋತ್ಸವ.

Advertisement
ಸಿರುಗುಪ್ಪ : ತಾಲೂಕಿನ ಸಿರಿಗೇರಿ ಗ್ರಾಮದ ಆರಾಧ್ಯ ದೈವ ಶ್ರೀ ನಾಗನಾಥೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಮಾ.25 ಬುಧವಾರದಂದು ಅದ್ದೂರಿಯಾಗಿ ಜರುಗಿತು.

ಜಾತ್ರಾ ಮಹೋತ್ಸವ ನಿಮಿತ್ತ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಅಭಿಷೇಕ, ವಿವಿಧ ಫಲಪುಷ್ಪ, ಆಭರಣಗಳು ಹಾಗೂ ವೀಳ್ಯದೆಲೆಯಿಂದ ಅಲಂಕರಿಸಿ ಮಹಾಮಂಗಳಾರತಿಗೈದು ವಿಶೇಷ ಪೂಜೆ ಸಲ್ಲಿಸಲಾಯಿತು.

ಸಾಯಂಕಾಲ ಭಕ್ತರು ಬೃಹತ್ ಗಾತ್ರದ ಹೂಮಾಲೆಯನ್ನು ಮೆರವಣಿಗೆಯ ಮೂಲಕ ತಂದು ರಥಕ್ಕೆ ಸಮರ್ಪಿಸಿದರು.

ಹಗಲುವೇಷ ಕಲಾತಂಡದವರಿಂದ ಶ್ರೀ ರಾಮ, ಶ್ರೀ ಆಂಜನೇಯ, ರಾಕ್ಷಸಿ, ಶ್ರೀ ವಾಲ್ಮೀಕಿ, ಸೇರಿದಂತೆ ಇನ್ನಿತರ ವೇಷಗಳ ಧರಿಸಿ ನೃತ್ಯೆಗೈಯುತ್ತಾ ಜಾತ್ರೆಗೆ ಸೇರಿದ ಜನಸಮೂಹವನ್ನು ಆಕರ್ಷಿಸಿದರು.

ಸಾಯಂಕಾಲ ಶ್ರೀನಾಗನಾಥೇಶ್ವರ ದೇವಸ್ಥಾನ ಆಡಳಿತ ಮಂಡಳಿಯಿಂದ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ತಂದು ರಥದಲ್ಲಿರಿಸಿ ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿಗೈದು ರಥೋತ್ಸವವಕ್ಕೆ ಚಾಲನೆ ನೀಡಲಾಯಿತು.

ವಿವಿಧ ವಾದ್ಯಗಳೊಂದಿಗೆ ದೇವಸ್ಥಾನದ ತೇರು ಮನೆಯಿಂದ ಎದುರು ಬಸವಣ್ಣ ದೇವಸ್ಥಾನದವರೆಗೆ ರಥವನ್ನು ಭಕ್ತರು ಎಳೆದು ಪೂಜೆ ಸಲ್ಲಿಸಿ ಮಹಾಮಂಗಳಾರತಿ ಮಾಡಿ ಮತ್ತೆ ದೇವಸ್ಥಾನದ ತೇರುಮನೆ ಕಡೆ ಸುವ್ಯವಸ್ಥಿತವಾಗಿ ಎಳೆತಂದರು.

ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಾದ ದಾಸಾಪುರ, ಗುಂಡಿಗನೂರು, ಶಾನವಾಸಪುರ, ನಡವಿ, ತೆಕ್ಕಲಕೋಟೆ, ಉಡೇಗೋಳ, ನಿಟ್ಟೂರು, ಹಾವಿನಾಳ್, ಮುದ್ದಟನೂರು, ಕೊಂಚಿಗೇರಿ, ಕ್ಯಾದಿಗೆಹಾಳ್, ಗೆಣಿಕೆಹಾಳ್, ಮಣ್ಣೂರು, ಎಮ್.ಸೂಗೂರ್, ದರೂರು, ಕರೂರು, ಬೈರಾಪುರ ಸೇರಿದಂತೆ ಇನ್ನಿತರ ಗ್ರಾಮದ ಭಕ್ತಾದಿಗಳು ಆಗಮಿಸಿ ಹರಕೆಯನ್ನು ಸಲ್ಲಿಸಿ ರಥಕ್ಕೆ ಹೂಹಣ್ಣು ಎಸೆದು ಭಕ್ತಿಯಿಂದ ನಮಿಸಿದರು.

ರಾಮನವಮಿಯಂದು ಸಾಯಂಕಾಲ ಸಿರಿಗೇರಮ್ಮ ದೇವಿ ರಥೋತ್ಸವವು ಜರುಗುವುದಾಗಿ ಗ್ರಾಮಸ್ಥರು ತಿಳಿಸಿದರು.

ವರದಿ : ಶ್ರೀನಿವಾಸ ನಾಯ್ಕ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ