ತುರುವೇಕೆರೆ: ಇತ್ತೀಚೆಗೆ ನಡೆದ 2026-27 ನೇ ಸಾಲಿನ ನಾಗಮಂಗಲ ತಾಲೂಕಿನ ತಾಲೂಕು ಮಟ್ಟದ ಪದವಿಪೂರ್ವ ಶಾಲಾ-ಕಾಲೇಜುಗಳ ಕ್ರೀಡಾಕೂಟದಲ್ಲಿ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಭಾಗವಹಿಸಿದ್ದ ಬಿಜಿಎಸ್ ಕಾಲೇಜಿನ (ಬಿಜಿ ನಗರ) ಮನಿತ್ ಎಂ. ಹಾಗೂ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತುರುವೇಕೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಯಸಂದ್ರ ಹೋಬಳಿ ಘಟಕದ ಅಧ್ಯಕ್ಷರಾ ಮುನಿರಾಜು ಹಾಗೂ ವಾಲ್ಮೀಕಿ ಸಮಾಜದ ಮುಖಂಡರಾದ ಶ್ರೀಮತಿ ಕಲ್ಪನರವರ ಪುತ್ರ ಮನಿತ್ ಎಂ. ತಮ್ಮ ತಂಡದೊಂದಿಗೆ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಬಿ.ಜಿ.ನಗರದ ಬಿ.ಜಿ.ಎಸ್ ಕಾಲೇಜಿನಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ತಂಡ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದಕ್ಕೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.
ವರದಿ: ಗಿರೀಶ್ ಕೆ ಭಟ್


