Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಮತ್ತು ಡಿ. ಕೆ ಶಿವಕುಮಾರ್​​​​ಗೆ ಹೈಕಮಾಂಡ್​ನಿಂದ ಬುಲಾವ್ 

Advertisement

ಬೆಂಗಳೂರು,: ಸಿಎಂ ಕುರ್ಚಿ ಮುಸುಕಿನ ಗುದ್ದಾಟ ಹಾಗೂ ಸಂಪುಟ ವಿಸ್ತರಣೆಯ ರಾಜಕೀಯ ಪ್ರಹಸನಗಳು. ಹೀಗೆ ಕರ್ನಾಟಕ ಕಾಂಗ್ರೆಸ್​​​ನಲ್ಲಿ (karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್​​​​ಗೆ (DK Shivakumar) ಹೈಕಮಾಂಡ್​ನಿಂದ ಬುಲಾವ್ ಬಂದಿದೆ.

ಮೇ 26ರಂದು ದೆಹಲಿಗೆ (New Delhi) ಬರುವಂತೆ ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಕರೆ ನೀಡಿದೆ. ಮೇಲ್ನೋಟಕ್ಕೆ ರಾಜ್ಯಸಭಾ ಚುನಾವಣೆ ಸಂಬಂಧ ಚರ್ಚಿಸಲು ಈ ಆಹ್ವಾನ ನೀಡಿರಬಹುದು ಎನ್ನಲಾಗಿದೆ. ಆದ್ರೆ, ಇದೇ ವೇಳೆ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಸಂಪುಟ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿ ನಿರ್ಮಾಣವಾಗಿರುವ ಗೊಂದಲಗಳನ್ನಕೇರಳದಲ್ಲಿ ಸರ್ಕಾರ ರಚನೆ ನಂತರ ಗಮನ ಹರಿಸುವುದಾಗಿ ಹೈಕಮಾಂಡ್ ಹೇಳಿತ್ತು.

ಅದರಂತೆ ಇದೀಗ ರಾಜ್ಯದತ್ತ ಚಿತ್ತ ಹರಿಸಿದ್ದು, ಮಂಗಳವಾರ ದೆಹಲಿಗೆ ಬರುವಂತೆ ಸಿಎಂ ಹಾಗೂ ಡಿಸಿಎಂಗೆ ಆಹ್ವಾನ ನೀಡಿದೆ. ಹೀಗಾಗಿ ಈ ಬೆಳವಣಿಗೆ ರಾಜ್ಯ ಕಾಂಗ್ರೆಸ್​​​ನಲ್ಲಿ ಸಂಚಲನ ಮೂಡಿಸಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST