Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ನಾನೇ ಐದು ವರ್ಷ ಸರ್ಟಿಫಿಕೇಟ್‌ ಕೊಟ್ಟುಕೊಂಡಿದ್ದಾರೆ : ಸತೀಶ್ ಜಾರಕಿಹೊಳಿ

Advertisement
ಬೆಂಗಳೂರು: ಸಿದ್ದರಾಮಯ್ಯ ಅವರು ನಾನೇ ಐದು ವರ್ಷ ಮುಖ್ಯಮಂತ್ರಿ ಎಂದು ಹೇಳಿದ ಮೇಲೆ ಬೇರೆಯವರು ಏನು ಹೇಳಲು ಸಾಧ್ಯ? ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ವಿಧಾನ ಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಸರ್ಟಿಫಿಕೇಟ್‌ ಕೊಟ್ಟುಕೊಂಡ ಮೇಲೆ ನಾವೇನು ಸರ್ಟಿಫಿಕೇಟ್‌ ಅವರೇ ಕೊಟ್ಟಿದ್ದಾರಲ್ಲ. ಹೇಳ್ಳೋ ಅವಶ್ಯಕತೆ ಏನಿಲ್ಲ. ಸಚಿವ ಸ್ಥಾನವನ್ನು ನಾವು ಉಳಿಸಿಕೊಂಡ್ರೆ ಸಾಕು, ಅವರವರು ಉಳಿದ್ರೆ ಸಾಕು ಅಂತಿದ್ದಾರೆ. ಇನ್ನು ಬೇರೆಯವರದ್ದು ಎಲ್ಲಿ ಕೇಳುತ್ತಾರೆ ಎಂದರು.

ಸಿದ್ದರಾಮಯ್ಯ ಎಷ್ಟುದಿನ ಮುಖ್ಯಮಂತ್ರಿಯಾಗಿರುತ್ತಾರೆ ಅಂತ ಹೇಳಿಕೆಗಳನ್ನು ಬಿಜೆಪಿ ಅವರು ನೀಡುತ್ತಿರುತ್ತಾರೆ. ಅವರು ಇವತ್ತೂಂದು ಹೇಳುತ್ತಾರೆ, ನಾಳೆ ಮತ್ತೂಂದು ಹೇಳುತ್ತಾರೆ. ಬಿಜೆಪಿ ನಾಯಕರು ಹೇಳುವ ಮಾತುಗಳನ್ನು ನಂಬುವ ಅವಶ್ಯಕತೆ ಇಲ್ಲ ಎಂದು ಅವರು ಹೇಳಿದರು.

ಡಿ. ಕೆ. ಶಿವಕುಮಾರ್‌ ಆಯೋಜಿಸಿದ ಔತಣಕೂಟದಲ್ಲಿ ಭಾಗವಹಿಸಿದ್ದರ ಬಗ್ಗೆ ಮಾತಾಡುತ್ತಾ, ಅದರಲ್ಲಿ ಅಂಥ ವಿಶೇಷವೇನೂ ಇಲ್ಲ. ಕೆಪಿಸಿಸಿ ಅಧ್ಯಕ್ಷರು ಕರೆದಾಗ ಭಾಗವಹಿಸಲೇಬೇಕಾಗುತ್ತದೆ ಎಂದು ಹೇಳಿದರು.

ಸಚಿವರು ದೆಹಲಿಗೆ ಹೋದಾಗಲೆಲ್ಲ ಹೈಕಮಾಂಡ್‌ ಭೇಟಿ ಮಾಡುತ್ತಾರೆ. ಯಾರು ಹೋಗುತ್ತಾರೆ ಅವರಲ್ಲೇ ಹೈಕಮಾಂಡ್‌ ಕರೆದಿತ್ತಾ ನೀವು ಹೋದ್ರಾ ಎಂದು ಕೇಳಬೇಕು. ನಾವು ಹೋಗಿದ್ದಾಗ ಹೇಳಿದ್ದೆವು.

ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ಮಾಡಿದ್ದೆವು. ಯಾವ ಅಲ್ಲೋಲ ಕಲ್ಲೋಲ ಆಗುವುದಿಲ್ಲ. ಅಲ್ಲೋಲ ಕಲ್ಲೋಲ ಯಾಕೆ ಆಗುತ್ತದೆ? ನಾವು 140 ಮಂದಿ ಇದ್ದೇವಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ