Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ವೈಜ್ಞಾನಿಕವಾಗಿ ಒಳ ಮೀಸಲಾತಿ ಜಾರಿ : ಸಿದ್ದರಾಮಯ್ಯ

Advertisement
ಬೆಂಗಳೂರು : ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಪರಿಶಿಷ್ಟ ಜಾತಿಗಳಲ್ಲಿ 101 ಒಳ ಪಂಗಡಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್‌ ನ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಮಿಷನ್‌ ಆಫ್‌ ಇನ್‌ಕ್ವೈರಿ ಆಯಕ್ಟ್‌ 1952ರ ಅನ್ವಯ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ.

ಈ ಆಯೋಗವು 2 ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಷರತ್ತು ವಿಧಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಂದಿನ ತೀರ್ಮಾನದವರೆಗೆ ರಾಜ್ಯ ಸರ್ಕಾರದ ಅಧೀನದ ಸಿವಿಲ್‌ ಸೇವೆಗಳಲ್ಲಿನ ಹಾಗೂ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸದಿರುವ ನಿರ್ಧಾರವನ್ನು ಸಹ ಕೈಗೊಳ್ಳಲಾಗಿದೆ.

ಆಯೋಗದ ವರದಿ ಬಂದ ತಕ್ಷಣ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಕ್ರಮವಹಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್