Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್.ಎಸ್.ಎಸ್ ನವರು ಸಂವಿಧಾನವನ್ನು ಈಗಲೂ ವಿರೋಧಿಸುತ್ತಿದ್ದಾರೆ : ಸಿದ್ದರಾಮಯ್ಯ

Advertisement
ಬೆಂಗಳೂರು : ಆರ್.ಎಸ್.ಎಸ್ ನವರು ಅಂಬೇಡ್ಕರ್ ಸಂವಿಧಾನವನ್ನು ಈಗಲೂ ವಿರೋಧಿಸುತ್ತಿದ್ದಾರೆ , ಎಚ್ಚರಿಕೆಯಿಂದ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಸಂಘ ಪರಿವಾರ ಮತ್ತು ಆರ್.ಎಸ್.ಎಸ್ ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ಹಿಂದೆಯೂ ವಿರೋಧಿಸಿದ್ದರು, ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು.

ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ‌ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ ಸಮಾಜದ ಬದಲಾವಣೆಗೆ ಬಳಸಿದರು.

ಅಂಬೇಡ್ಕರ್ ಅವರ ಹೆಸರಲ್ಲಿ ಬಿಜೆಪಿಯವರು, ಸಂಘ ಪರಿವಾರದವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ.

ಆದರೆ, ಸತ್ಯ ಏನೆಂದರೆ “ನನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಡಾಂಗೆ” ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಬರೆದಿದ್ದಾರೆ. ಇಂಥಾ ಸತ್ಯಗಳನ್ನು ಸಮಾಜದ ಮುಂದಿಟ್ಟು ಸಂಘ ಪರಿವಾರದ ಸುಳ್ಳುಗಳನ್ನು ಬಹಿರಂಗಗೊಳಿಸಬೇಕು.

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಅನ್ನು ಬೆಂಗಳೂರಿನಲ್ಲಿ ನಾನು ಸ್ಥಾಪಿಸಲು ಕಾರಣ ಅಂಬೇಡ್ಕರ್ ಅವರನ್ನು ಓದಿಕೊಂಡವರು ಅವರ ಮಾರ್ಗದಲ್ಲಿ ನಡೆಯಲಿ ಎಂದು. ಅಂಬೇಡ್ಕರ್ ಅವರಿಗೆ ಅಂಬೇಡ್ಕರ್ ಅವರೇ ಸಾಟಿ. ಮತ್ತೊಬ್ಬ ಅಂಬೇಡ್ಕರ್ ಬರಲು ಸಾಧ್ಯವಿಲ್ಲ.

ಆದರೆ ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಪಾಲಿಸಿ ಅವರ ಹಾದಿಯಲ್ಲಿ ನಡೆಯಬೇಕು. ವಿಶ್ವದ ಎಲ್ಲಾ ಸಂವಿಧಾನಗಳನ್ನು ಓದಿ, ಅರ್ಥೈಸಿಕೊಂಡು ಭಾರತೀಯ ಸಮಾಜಕ್ಕೆ ಅನ್ವಯ ಆಗುವ ವಿಶ್ವ ಶ್ರೇಷ್ಠ ಸಂವಿಧಾನವನ್ನು ಅಂಬೇಡ್ಕರ್ ಅವರು ಭಾರತಕ್ಕೆ ಕೊಟ್ಟರು.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಸನಾತನಿ ಒಬ್ಬ ಶೂ ಎಸೆದಿರುವುದು ಸನಾತನಿಗಳು, ಪಟ್ಟಭದ್ರರು ಸಮಾಜದಲ್ಲಿ ಇನ್ನೂ ಇದ್ದಾರೆ ಎನ್ನುವುದಕ್ಕೆ ಸಾಕ್ಷಿ. ಶೂ ಎಸೆತವನ್ನು ದಲಿತರಷ್ಟೇ ಅಲ್ಲ, ಪ್ರತಿಯೊಬ್ಬರೂ ವಿರೋಧಿಸಬೇಕು.

ಹೀಗಾದಾಗ ಮಾತ್ರ ಸಮಾಜ ಬದಲಾವಣೆಯ ಹಾದಿಯಲ್ಲಿದೆ ಎಂದು ಸಮಾಧಾನ ಪಟ್ಟುಕೊಳ್ಳಬಹುದು. ನಾನು ಬುದ್ದ, ಬಸವ, ಅಂಬೇಡ್ಕರ್ ವಿಚಾರದಲ್ಲಿ ನಂಬಿಕೆ ಇಟ್ಟುಕೊಂಡಿದ್ದೀನಿ. ಈ ಕಾರಣಕ್ಕೇ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯಬೇಕು ಎಂದು ಆಶಿಸುತ್ತೇನೆ.

ವಿಜ್ಞಾನ ಓದಿಯೂ ಮೂಢ ನಂಬಿಕೆ ಆಚರಿಸುವವರಾಗಬೇಡಿ. ಮೈಸೂರು ವಿವಿಯಲ್ಲಿ ಅಂಬೇಡ್ಕರ್ ಅಧ್ಯಯನ‌ ಕೇಂದ್ರ ಆಗಿ 25 ವರ್ಷಗಳಾಗಿವೆ. ಈ ಸಂದರ್ಭದಲ್ಲಿ “ವಿಶ್ವ ಜ್ಞಾನಿ ಅಂಬೇಡ್ಕರ್ ಸಭಾ ಭವನ” ಲೋಕಾರ್ಪಣೆ ಆಗುತ್ತಿರುವುದು ಸ್ವಾಗತಾರ್ಹ. ಸಮಾಜದ ಪರವಾಗಿ ಇರುವವರ ಜೊತೆ ನಿಮ್ಮ ಸಹವಾಸ ಇರಲಿ. ಸಮಾಜ ಬದಲಾವಣೆಯ ವಿರೋಧಿಗಳ, ಸನಾತನಿಗಳ ಸಹವಾಸ ಮಾಡಬೇಡಿ ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ