Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ಹಣ ಸಾಲದ ಕಂತಿಗೆ ಕಡಿತ ಮಾಡುವಂತಿಲ್ಲ : ಸಿದ್ದರಾಮಯ್ಯ ಖಡಕ್ ಸೂಚನೆ 

Advertisement
ಬೆಂಗಳೂರು: ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗುವ ಗೃಹಲಕ್ಷ್ಮಿ ಸಹಾಯಧನ ಹಣವನ್ನು ಖಾಸಗಿ ಫೈನಾನ್ಸ್ ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಳೆಯ ಸಾಲ ಬಾಕಿಗೆ ಬಲವಂತವಾಗಿ ಕಡಿತ ಮಾಡುತ್ತಿರುವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮತ್ತು ಶಾಸಕ ದಿನೇಶ್ ಗೂಳಿಗೌಡ ಈ ಕುರಿತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಈ ಕುರಿತು ಸೂಚನೆ ನೀಡಿದ್ದಾರೆ.

ಜತೆಗೆ ಮುಖ್ಯಮಂತ್ರಿ ಕಾರ್ಯದರ್ಶಿ ಅವರು ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ ಗಳಿಗೆ ತುರ್ತು ಕ್ರಮಕ್ಕೆ ನಿರ್ದೇಶಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆ ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಶಕ್ತಿಯಾಗಿದೆ. ಪ್ರತಿ ತಿಂಗಳು 2000 ರೂ. ಸಹಾಯಧನ ಪಾವತಿಸಲಾಗುತ್ತಿದೆ.

ಇತ್ತೀಚೆಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾದ ಗೃಹಲಕ್ಷ್ಮಿ ಹಣವನ್ನು ಖಾಸಗಿ ಫೈನಾನ್ಸ್ ಸಂಸ್ಥೆಗಳು, ಸ್ತ್ರೀ ಶಕ್ತಿ ಸಂಘಗಳು ಸಾಲದ ಬಾಕಿ ಅಥವಾ ಬಡ್ಡಿ ಎಂದು ಬಲವಂತವಾಗಿ ಕಡಿತಗೊಳಿಸುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕೆಂದು ದಿನೇಶ್ ಗೂಳಿಗೌಡ ಪತ್ರ ಬರೆದು ಮನವಿ ಮಾಡಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚೆನ್ನೆöÊ ಸೂಪರ್ ಕಿಂಗ್ಸ್ಗೆ ೨೩೦ ರನ್‌ಗಳ ಗೆಲುವಿನ ಗುರಿನಾಳೆ ಆರ್‌ಸಿಬಿ- ಎಸ್‌ಆರ್‌ಎಚ್ ಪಂದ್ಯಜೂನ್ ೧೧ ರಿಂದ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿರಾಜ್ಯ ಜೆಡಿಎಸ್ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾಗಿ ಶಿವಕುಮಾರ್ ನಾಟೀಕಾರ ನೇಮಕಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಆದೇಶವ ಮರುಪರಿಶೀಲಿಸುವಂತೆ ಹೈಕೋರ್ಟ್ ತಾಕೀತು ಗುಜರಾತ್ ಟೈಟನ್ಸ್ಗೆ ಮೊದಲೆರಡು ಸ್ಥಾನದಲ್ಲೇ ಅಭಿಯಾನ ಮುಗಿಸುವ ಗುರಿಧರ್ಮಸ್ಥಳ ಗ್ರಾಮದ 'ಬುರುಡೆ ರಹಸ್ಯ : ಬಂಗ್ಲೆಗುಡ್ಡೆ ಅರಣ್ಯದಲ್ಲಿ SIT ತೀವ್ರ ತನಿಖೆ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ 8,67,590/- ರೂ. ದಂಡ ವಸೂಲಿಅಪರಿಚಿತನಿಂದ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್ ಹತ್ಯೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಿಲ್ಲ : ಸಿದ್ದರಾಮಯ್ಯ