Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಪುಟ ಪುನರ್ ರಚನೆ ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದು : ಸಿದ್ದರಾಮಯ್ಯ 

Advertisement
ಚಿಕ್ಕಮಗಳೂರು: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡಿರುವ ವಿಚಾರವಾಗಿ, ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ.

ಸಂಪುಟ ಪುನರ್ ರಚನೆ ಕಾರ್ಯ ಬಾಕಿಯಿದೆ. ಐದು ರಾಜ್ಯಗಳ ಚುನಾವಣೆ, ಬಜೆಟ್ ಅಧಿವೇಶನ ಸಂಪುಟ ಪುನರ್ ರಚನೆ ವಿಳಂಬಕ್ಕೆ ಕಾರಣವಿರಬಹುದು ಎಂದರು.

ಕಾಂಗ್ರೆಸ್ ಪಕ್ಷ ಸೋಲನ್ನು ಒಪ್ಪಿಕೊಂಡಿಲ್ಲ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ಖಂಡಿತ. ತಲೆದಂಡಕ್ಕೆ ಚುನಾವಣೆಯ ಸೋಲು ಗೆಲುವು ಕಾರಣವಲ್ಲ. ಸಲೀಂ ಅಹ್ಮದ್ ಅವರು ಪಕ್ಷದ ಮುಖಂಡರು. ಅವರು, ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕೆಲವರ ಪಕ್ಷವಿರೋಧಿ ಕಾರ್ಯಗಳ ಬಗ್ಗೆ ಹೇಳಿಕೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆಯೇ ಹೊರತು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರಾಜಿತವಾಗಲಿದೆ ಎಂದು ಅವರು ಹೇಳಿರುವುದಿಲ್ಲ. ಪಕ್ಷವಿರೋಧಿ ಚಟುವಟಿಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದರು.

ಮಲೆನಾಡಿನಲ್ಲಿ ರೆಸಾರ್ಟ್ ಗಳಿಗೆ ಬೇಕಾಬಿಟ್ಟಿಯಾಗಿ ಅನುಮತಿ ನೀಡುತ್ತಿರುವ ಸರ್ಕಾರ, ಅರಣ್ಯವಾಸಿಗಳಿಗೆ ಹಕ್ಕು ಪತ್ರ ನೀಡುತ್ತಿಲ್ಲ ಎನ್ನುವ ವಿಚಾರವಾಗಿ ಅರಣ್ಯ ಇಲಾಖೆಯಿಂದ ಹಕ್ಕು ಪತ್ರ ನೀಡುವುದೂ ಸೇರಿದಂತೆ ಹಲವು ವಿಷಯದ ಬಗ್ಗೆ ಸಧ್ಯದಲ್ಲಿಯೇ ಸಭೆ ನಡೆಸಲಾಗುವುದು ಎಂದರು.

ಪ್ರವಾಸಿಗರಿಗೆ ಕರ್ನಾಟಕ ಸುರಕ್ಷಿತ ತಾಣವಲ್ಲ ಎಂದು ಕೇರಳ ರಾಜ್ಯದಿಂದ ಟೀಕೆಗಳು ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇರಳ ರಾಜ್ಯದ ಬಾಲಕಿ ಚಿಕ್ಕಮಗಳೂರಿಗೆ ಬಂದು ಮೃತಪಟ್ಟಿರುವ ವಿಷಯ ತನಿಖೆಯಾಗಲಿದೆ. ಆದರೆ ಕರ್ನಾಟಕ ರಾಜ್ಯ ಪ್ರವಾಸಿಗರಿಗೆ ಸುರಕ್ಷಿತವಲ್ಲ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ