Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ : ಸಿದ್ದರಾಮಯ್ಯ

Advertisement

ಚಾಮರಾಜನಗರ : ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ತಿಳಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುವ ಬಗ್ಗೆ ಮಾಜಿ ಸಂಸದ ಡಿ.ಕೆ.ಸುರೇಶ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಇಂತಹ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಐದು ವರ್ಷ ಆಡಳಿತ ನಡೆಸಲು ಜನಾದೇಶ ಇದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ.

ನವೆಂಬರ್ ಕ್ರಾಂತಿ ಎಂಬ ವಿಷಯವನ್ನು ಮಾಧ್ಯಮದವರೇ ಸೃಷ್ಟಿಸಿದರು. ಜನರ ಆಸೆಯಂತೆ ಐದು ವರ್ಷ ಸರ್ಕಾರ ನಡೆಸಿ ನಂತರವೂ ಪುನ: ಕಾಂಗ್ರೆಸ್ ಪಕ್ಷವೇ ಆಯ್ಕೆಯಾಗಿ ಬರಲಿದೆ ಎಂದು ತಿಳಿಸಿದರು.

ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಕೆ ಬಗ್ಗೆ ನಡೆಯುತ್ತಿರುವ ಚರ್ಚೆಗೆ ಉತ್ತರಿಸಿ, ಇದು ಅನಾವಶ್ಯಕ ಚರ್ಚೆ. ಎರಡೂವರೆ ವರ್ಷದ ನಂತರ ಸಂಪುಟ ಪುನಾರಚನೆ ಮಾಡಬಹುದು ಎಂದು ತಿಳಿಸಿದ ನಂತರವಷ್ಟೇ, ಮುಖ್ಯಮಂತ್ರಿ ಬದಲಾವಣೆಯ ವಿಷಯ ಮುನ್ನಲೆಗೆ ಬಂದಿರುವುದು. ಸಂಪುಟ ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬೇಕಿದೆ.

ಒಟ್ಟು 34 ಸಚಿವರ ಸ್ಥಾನವಿದ್ದು, ಅದರಲ್ಲಿ ಎರಡು ಸ್ಥಾನಗಳು ಖಾಲಿಯಿದೆ. ಸಂಪುಟ ಪುನಾರಚನೆ ಸಂದರ್ಭದಲ್ಲಿ ಖಾಲಿ ಇರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್