Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ರಾಜ್ ಕುಮಾರ್ ಅವರ ಕನಸನ್ನು ನಮ್ಮ ಸರ್ಕಾರ ನನಸು ಮಾಡಲಿದೆ : ಸಿದ್ಧರಾಮಯ್ಯ 

Advertisement
ಬೆಂಗಳೂರು: ಡಾ. ರಾಜ್ ಕುಮಾರ್ ಅವರ ಕನಸನ್ನು ನಮ್ಮ ಸರ್ಕಾರ ನನಸು ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಅವರು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ರಾತ್ರಿ 8 ಗಂಟೆಗೆ ಭೇಟಿಗೆ ಸಮಯ ಕೊಟ್ಟಿದ್ದರು.

ಈ ಕಾರ್ಯಕ್ರಮಕ್ಕಾಗಿ ನಿನ್ನೆಯೇ ದೆಹಲಿಯಿಂದ ಹೊರಟು ಉದ್ಘಾಟನೆ ತಪ್ಪಿಸಬಾರದೆಂದು ಆಗಮಿಸಿದ್ದೇನೆ. ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರ ಮೊದಲಿನಿಂದಲೂ ಎಲ್ಲಾ ರೀತಿಯ ಸಹಾಯವನ್ನು ಮಾಡುತ್ತಾ ಬಂದಿದೆ, ಮುಂದೆಯೂ ಮಾಡಲಿದೆ.

ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣವನ್ನು ಪಿ.ಪಿ.ಪಿ ಮಾದರಿಯಲ್ಲಿ ಕೈಗೊಳ್ಳಲಿದ್ದು, ನೂರು ಎಕರೆಗೂ ಹೆಚ್ಚು ಜಮೀನು ಒದಗಿಸಲಾಗಿದೆ. ಚಿತ್ರನಗರಿ ಡಾ|| ರಾಜ್ ಕುಮಾರ್ ಅವರ ಕನಸಾಗಿತ್ತು, ಅದನ್ನು ನನಸಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಹೇಳಿದ್ದಾರೆ.

1972 ರಿಂದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದವರು ಬಹಳ ಕಷ್ಟದ ದಿನಗಳಿದ್ದರೂ ಕೂಡ ಚಲನಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ನಿರ್ಮಾಪಕರಿಗೆ ಅಭಿನಂದಿಸುತ್ತೇನೆ. ಸಂಘದ ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ. ಅಗತ್ಯ ನೆರವು ನೀಡುತ್ತೇವೆ ಎಂದು ಹೇಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ