ಬೆಂಗಳೂರು: ಕಳೆದ ಆರು ತಿಂಗಳಿಂದ ರಾಜ್ಯ ಕಾಂಗ್ರೆಸ್ ನಲ್ಲಿ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದ್ದ ನಾಯಕತ್ವ ಗೊಂದಲ ಇಂದು ಮಹತ್ವದ ಘಟ್ಟ ತಲುಪಲಿದೆ. ಕರ್ನಾಟಕ ಖಂಡ ಸುಧೀರ್ಘ ಅವಧಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗುರುವಾರ ಬೆಳಿಗ್ಗೆ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಉಪಾಹಾರ ಕೂಟ ಆಯೋಜಿಸಿದ್ದು, ಮಧ್ಯಾಹ್ನದ ನಂತರ ರಾಹುಲ್ ಗಾಂಧಿಯವರ ಸೂಚನೆಯಂತೆ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ.ನಂತರ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎನ್ನಲಾಗಿದೆ.
ಈ ನಡುವೆ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸದಂತೆ ಬೆಂಬಲಿಗರಿಂದ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಪ್ರತಿಭಟನೆ ನಡೆಸಲಾಗಿದೆ.

