Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಹೂರ್ತ ನಿಗದಿ : ಬಿ. ವೈ ವಿಜಯೇಂದ್ರ 

Advertisement
ಬೆಂಗಳೂರು: ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಹೂರ್ತ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಚರ್ಚೆ ಮಾಡಿ ಈಗಾಗಲೇ ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿ ಮಾಡಿದ್ದಾರೆ.


ಆ ಮುಹೂರ್ತ ಯಾವುದೆಂದು ಸಿದ್ದರಾಮಯ್ಯನವರೇ ಬಾಯಿ ಬಿಡಬೇಕಿದೆ. ಸಿದ್ದರಾಮಯ್ಯನವರ ರಾಜೀನಾಮೆ ನಿಶ್ಚಿತವಿದೆ ಎಂದು ತಿಳಿಸಿದರು.


ಸಿದ್ದರಾಮಯ್ಯನವರು ಪೂರ್ಣ ಅವಧಿ ಪೂರೈಸುವುದಿಲ್ಲ. ಅವರು ಅತಿ ಶೀಘ್ರವೇ ರಾಜೀನಾಮೆ ಕೊಡುತ್ತಾರೆ ಎಂದ ಅವರು, 5 ವರ್ಷ ಕಾಲ ಸಿಎಂ ಆಗಿರುವುದಾಗಿ ರಾಜ್ಯದ ಜನರಿಗೆ ಸಿದ್ದರಾಮಯ್ಯನವರು ಹೇಳಲಿ, ನೋಡೋಣ ಎಂದು ಸವಾಲು ಹಾಕಿದರು.


ಮುಖ್ಯಮಂತ್ರಿಗಳು ಮತ್ತವರ ಕುಟುಂಬ ಆರೋಪಿ ಸ್ಥಾನದಲ್ಲಿ ನಿಂತಿದೆ. ಭ್ರಷ್ಟಾಚಾರದ ಸಂಬಂಧ ರಾಜ್ಯದ ಜನತೆಗೆ ಅವರು ಉತ್ತರ ಕೊಡಬೇಕಿದೆ ಎಂದು ಆಗ್ರಹಿಸಿದರು.


ಕಾಂಗ್ರೆಸ್ ಮುಖ್ಯಮಂತ್ರಿ ಸೇರಿ ಕಾಂಗ್ರೆಸ್ಸಿನ ಎಲ್ಲರೂ ಭ್ರಷ್ಟಾಚಾರದ ಕುರಿತು ಉದ್ದುದ್ದ ಭಾಷಣ ಬಿಗಿಯುತ್ತಾರೆ. ರಾಜ್ಯದ ಹಣಕಾಸಿನ ದುಸ್ಥಿತಿಯಿಂದ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸರಕಾರವು ಗುತ್ತಿಗೆ ಕಾಮಗಾರಿಗೆ ಬಿಲ್ ಪಾವತಿಸದ ಕಾರಣ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸ್ವತಃ ಮುಖ್ಯಮಂತ್ರಿಗಳು ಆರೋಪಿ ಸ್ಥಾನದಲ್ಲಿದ್ದಾರೆ. ಇದರ ನಡುವೆ ಉಪ ಚುನಾವಣೆಗಳೂ ನಡೆಯುತ್ತಿವೆ ಎಂದರು.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ