ಹುಬ್ಬಳ್ಳಿ: ಕಾಂಗ್ರೆಸ್ (Congress) ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಜೊತೆ ವೈಚಾರಿಕವಾಗಿ ಅನೇಕ ಭಿನ್ನಾಭಿಪ್ರಾಯಗಳು ಇರಬಹುದು.
ಆದರೂ ಸಹ ಅವರಂತಹ ಹಿರಿಯ ನಾಯಕರಿಗೆ ಒಂದು ಪೆನ್‌ಡ್ರೈವ್ ತೋರಿಸಿ ಬೆದರಿಸುವ ರಾಜಕೀಯ ಮಾಡಿರುವುದು ನಿಜಕ್ಕೂ ಆಘಾತಕಾರಿ ಹಾಗೂ ಖಂಡನೀಯ.
ಈ ರೀತಿ ಬೆಳವಣಿಗೆಯ ಹಿಂದೆ ಯಾರ ಕೈವಾಡ ಇದೆ ಎಂಬುದನ್ನ ಕಾಂಗ್ರೆಸ್ ಹೈಕಮಾಂಡ್ ಬಹಿರಂಗ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆಗ್ರಹ ಮಾಡಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಇದಕ್ಕೆ ಉತ್ತರ ನೀಡಬೇಕು
ಈ ವಿಚಾರವಾಗಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಆಗುತ್ತಿರುವ ಬೆಳವಣಿಗೆ ಗಮನಿಸಿದರೆ ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ಮನೋಭಾವ ಇದೆ ಎಂದು ಅನಿಸುತ್ತದೆ.
ಈ ರೀತಿ ಆಗುತ್ತಿರುವುದು ನಿಜಕ್ಕೂ ಆತಂಕಕಾರಿ. ರಾಜಕೀಯದಲ್ಲಿ ಮೌಲ್ಯಗಳು ಕುಸಿಯುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಸಿದ್ದರಾಮಯ್ಯ ಅವರ ವಿಚಾರದಲ್ಲಿ ನಡೆದ ಈ ಬೆಳವಣಿಗೆ ಹಿಂದೆ ಯಾರು ಇರುವುದು ಎನ್ನುವುದರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸ್ಷಷ್ಟನೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.


