Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು : ಸಿದ್ದರಾಮಯ್ಯ 

Advertisement
ಬೆಂಗಳೂರು : ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು.

ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು. ಅದಕ್ಕೇ ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ – 2025” ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು.

ಅದಕ್ಕೇ ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸುತ್ತಾರೆ.ಸಮಸಮಾಜ ನಿರ್ಮಾಣ, ಅಸಮಾನತೆ ನಿವಾರಣೆ ನಮ್ಮ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಆಶಯವಾಗಿತ್ತು.

We the people of INDIA ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ. ಈ ದೇಶದ ಜನತೆಗೆ ಎಂಥಾ ಸಂವಿಧಾನ ಬೇಕು ಎನ್ನುವ ಬಗ್ಗೆ ಒಂದು ವರ್ಷ ಕಾಲ ಸಂವಿಧಾನ ಸಭೆಯಲ್ಲಿ ಸಮಗ್ರ ಚರ್ಚೆ ಬಳಿಕ ಅಂಗೀಕರಿಸಲಾಗಿದೆ.

ಫೆಡರಲ್, ಯೂನಿಟರಿ, ರಿಟರ್ನ್, ಅನ್ ರಿಟರ್ನ್ ಸಂವಿಧಾನಗಳು ವಿಶ್ವದಲ್ಲಿವೆ. ನಮ್ಮದು ರಿಟರ್ನ್ (ಲಿಖಿತ) ಸಂವಿಧಾನ. ನಮ್ಮ ದೇಶದಲ್ಲಿರುವಷ್ಟು ಜಾತಿ, ಧರ್ಮಗಳು ಬೇರೆ ಯಾವ ದೇಶದಲ್ಲೂ ಇಲ್ಲ. ಹೀಗಾಗಿ ಈ ನೆಲಕ್ಕೆ ಒಪ್ಪಿಗೆಯಾಗುವ ಸಂವಿಧಾನವನ್ನು ಅಂಬೇಡ್ಕರ್ ಕೊಟ್ಟರು.

ಮನುವಾದಿಗಳು ಸಂವಿಧಾನ ರಚನೆ ಅಂಬೇಡ್ಕರ್ ಅವರಿಂದ ಆಗಿಲ್ಲ ಎಂದು ವಾದಿಸುತ್ತಾರೆ. ಆದರೆ ಅಂಬೇಡ್ಕರ್ ಅವರೇ ಸಂವಿಧಾನ ಶಿಲ್ಪಿ ಎನ್ನುವುದನ್ನು ಮರೆಯಬಾರದು.

ಅಂಬೇಡ್ಕರ್ ಅವರಿಗೆ ಈ ದೇಶದ ಜಾತಿ ವ್ಯವಸ್ಥೆ ಮತ್ತು ಅಪಾಯಗಳು ಅಂಬೇಡ್ಕರ್ ಅವರಿಗೆ ಅರ್ಥ ಆಗಿತ್ತು. ಅದಕ್ಕೇ ನಮ್ಮ ಸಂವಿಧಾನದಲ್ಲಿ ಮೀಸಲಾತಿಯನ್ನು ಸೇರಿಸಿದರು.

ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಆಶಯ. ಆದರೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದರೂ ಸಂವಿಧಾನದ ಆಶಯ ಈಡೇರಿಲ್ಲ. ಬಸವಣ್ಣನವರಾದಿಯಾಗಿ ಎಲ್ಲಾ ಮಹಾತ್ಮರೂ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರೂ ಪಟ್ಟಭದ್ರರು ಜಾತಿ ಹೋಗಲು ಬಿಡುತ್ತಿಲ್ಲ. ಕೆಳ ಜಾತಿಯ ಶೂದ್ರ ವರ್ಗದವರಿಗೆ ಆರ್ಥಿಕ ಶಕ್ತಿ ಬಂದಾಗ ಮಾತ್ರ ಜಾತಿ ವ್ಯವಸ್ಥೆ ದುರ್ಬಲವಾಗುತ್ತದೆ.

ಅಸಮಾನತೆ ಇರುವ ದೇಶದಲ್ಲಿ ಸಮಾನತೆ ಸುಲಭವಾಗಿ ಬರುವುದಿಲ್ಲ. ದಲಿತರನ್ನು, ಶೂದ್ರರನ್ನು ಹಿಂದುಳಿದವರನ್ನು, ಮುಸ್ಲೀಮರನ್ನು, ಅಲ್ಪಸಂಖ್ಯಾತರನ್ನು ದ್ವೇಷಿಸಿ ಎಂದು ನಮ್ಮ ಧರ್ಮವೂ ಹೇಳುವುದಿಲ್ಲ, ಯಾವ ಧರ್ಮವೂ ಹೇಳುವುದಿಲ್ಲ.

ಸಂವಿಧಾನ ಅಂಗೀಕಾರಕ್ಕೆ 285 ಮಂದಿ ಸದಸ್ಯರಲ್ಲಿ 284 ಮಂದಿ ಪೂರ್ತಿ ಸಹಿ ಹಾಕಿದರು. ಒಬ್ಬರು ಮಾತ್ರ ಹಾಕಲಿಲ್ಲ. ಹೀಗಾಗಿ ಬಹುತೇಕ ಎಲ್ಲರಿಗೂ ಒಪ್ಪಿಗೆ ಆಗುವಂತೆ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದರು.

ಸಂವಿಧಾನದ ಸಮಾನತೆಯ ಆಶಯವನ್ನು ಈಡೇರಿಸುವ ಸಲುವಾಗಿಯೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವು ಭಾಗ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದೆ.

ಎಲ್ಲಾ ಭಾಗ್ಯಗಳ ಹಿಂದೆ ಹಾಗೂ ಈಗ ಜಾರಿ ಮಾಡಿರುವ ಐದೂ ಗ್ಯಾರಂಟಿಗಳ ಹಿಂದೆ ಅಸಮಾನತೆ ನಿವಾರಿಸುವ ಮತ್ತು ಸರ್ವರಿಗೂ ಆರ್ಥಿಕ ಶಕ್ತಿ ಬರಲಿ ಎನ್ನುವ ಆಶಯ ಇದೆ ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ