Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೀಘ್ರದಲ್ಲೇ ರಾಜ್ಯ ಬಜೆಟ್ ಮಂಡನೆಯ ದಿನಾಂಕ ಘೋಷಣೆ : ಸಿದ್ದರಾಮಯ್ಯ

Advertisement
ಬೆಂಗಳೂರು : ಶೀಘ್ರದಲ್ಲೇ ರಾಜ್ಯ ಬಜೆಟ್ ಮಂಡನೆಯ ದಿನಾಂಕವನ್ನು ಘೋಷಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಶೀಘ್ರದಲ್ಲೇ ರಾಜ್ಯ ಬಜೆಟ್ ಮಂಡನೆಯ ದಿನಾಂಕವನ್ನು ಘೋಷಣೆ ಮಾಡುತ್ತೇನೆ.ಹಬ್ಬ ಮುಗಿಯಲಿ, ಹಬ್ಬದ ನಂತರ ದಿನಾಂಕ ಪ್ರಕಟಿಸುತ್ತೇನೆ' ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, “ನಾನಾಗಲಿ ಅಥವಾ ಡಿ.ಕೆ. ಶಿವಕುಮಾರ್ ಆಗಲಿ, ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇವೆ” ಎಂದು ಸ್ಪಷ್ಟಪಡಿಸಿದರು.

ಪದೇ ಪದೇ ನಾಯಕತ್ವ ಬದಲಾವಣೆ ಬಗ್ಗೆ ಪ್ರಶ್ನೆ ಕೇಳಿದ ಮಾಧ್ಯಮಗಳ ವಿರುದ್ಧ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು. “ಬೇರೆ ವಿಷಯಗಳಿಲ್ಲವೇ? ಈ ಬಗ್ಗೆ ಯಾರಾದರೂ ಹೇಳಿಕೆ ನೀಡಿದ್ದರೆ ಅವರನ್ನೇ (ಡಿ.ಕೆ. ಸುರೇಶ್ ಅವರಂತಹವರು) ಹೋಗಿ ಕೇಳಿ” ಎಂದು ಖಾರವಾಗಿ ಉತ್ತರಿಸಿದರು.

ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ತಮ್ಮ ಸ್ವಂತ ಹಣದಲ್ಲಿ ಪ್ರವಾಸಕ್ಕೆ ಹೋದರೆ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದರು. ಮೂಲಗಳ ಪ್ರಕಾರ ಮಾರ್ಚ್ ಮೊದಲ ವಾರ ಅಥವಾ 2 ನೇ ವಾರದಲ್ಲಿ ಬಜೆಟ್ ಮಂಡನೆಯಾಗುವ ಸಾಧ್ಯತೆಯಿದೆ.

ಈ ಬಾರಿಯ ಬಜೆಟ್‌ನಲ್ಲಿಯೂ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ಮತ್ತು ಹಣ ಮೀಸಲಿಡುವ ಸಾಧ್ಯತೆಯಿದೆ. ಅಭಿವೃದ್ಧಿ ಕೆಲಸಗಳು, ಕೃಷಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಯಾವ ರೀತಿ ಹಣ ಹಂಚಿಕೆಯಾಗುತ್ತದೆ ಎಂಬ ಕುರಿತು ರಾಜ್ಯದ ಜನರಲ್ಲಿ ಭಾರಿ ಕುತೂಹಲವಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ