Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಕೇಂದ್ರ ಬಜೆಟ್ ನಲ್ಲಿ  ಏನನ್ನು ನಾವು ನಿರೀಕ್ಷೆ ಮಾಡಲ್ಲ : ಸಿದ್ದರಾಮಯ್ಯ ವಾಗ್ದಾಳಿ

Advertisement
ಕೊಡಗು : ನಾಳೆ ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ರಾಜ್ಯಕ್ಕೆ ಏನಾದರೂ ಸಿಗಬಹುದು ಎಂಬ ನಿರೀಕ್ಷೆಯನ್ನು ನಾವು ಮಾಡಲ್ಲ, ಕೇಂದ್ರ ಸರ್ಕಾರ ಕಿವುಡಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಭಾಗಮಂಡಲದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ತೆರಿಗೆ ಪಾಲನ್ನು ಪಡೆಯಲು ನಿರಂತರವಾಗಿ ಪ್ರಯತ್ನ ಮಾಡಲಾಗುವುದು ಎಂದು ಸಿಎಂ ಹೇಳಿದ ಅವರು, ಕೇಂದ್ರ ಸರ್ಕಾರದಿಂದ ನಿರೀಕ್ಷೆ ಮಾಡುವುದೇ ಇಲ್ಲ ಎಂದೇನಿಲ್ಲ.ನಿರೀಕ್ಷೆ ಮಾಡಿದರೂ ಅವು ಹುಸಿಯಾಗುತ್ತಿವೆ ಎಂದು ಜರಿದರು.


ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರಕ್ಕೆ ತೆರಿಗೆ ಕೊಡುತ್ತೇವೆ. ದೆಹಲಿಗೆ ಹೋಗಿ ತೆರಿಗೆ ಹಂಚಿಕೆಯಲ್ಲಿ ಕಡಿಮೆ ಅನುದಾನ ಬರುತ್ತಿದೆ, ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯಕ್ಕೆ ಅನುದಾನ ಕಡಿಮೆಯಾಗಿದೆ, ಕೇಂದ್ರದಿಂದ ಅನುದಾನ ಬರುತ್ತಿಲ್ಲ ಎಂದು ಶಾಸಕರು , ಸಂಸದರು, ಸಚಿವರು ದೆಹಲಿಯಲ್ಲಿಯೇ ಪ್ರತಿಭಟನೆ ಮಾಡಿದೆವು. ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ಅನುದಾನ ನೀಡುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು. ಇಂದಿನವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ ಎಂದು ಸಿಎಂ ಆರೋಪಿಸಿದರು.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ