Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಕೀಯವಾಗಿ ಯಡಿಯೂರಪ್ಪ ಮುಗಿಸಲು ಬೊಮ್ಮಾಯಿ ಪ್ಲಾನ್ : ಸಿದ್ದರಾಮಯ್ಯ

Advertisement
ಬೆಳಗಾವಿ: ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು. ಅದಕ್ಕಾಗಿ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಗೆಲುವಿಗೆ ಪ್ರಚಾರ ಕೈಗೊಂಡು ಮಾತನಾಡಿದ ಅವರು, ಮೋದಿ ಮಹಾನ್ ಸುಳ್ಳುಗಾರ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದರು.

ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಎಂದು ದೇವೇಗೌಡರು ಹೇಳಿದ್ದರು. ಈಗ ಇಬ್ಬರೂ ಬಾಯಿ ಬಾಯಿ ಆಗಿದ್ದಾರೆ ಎಂದು ಟಾಂಗ್‌ ನೀಡಿದರು.

ನರೇಂದ್ರ ಮೋದಿ ಕುಟುಂಬ ರಾಜಕಾರಣದ ಬಗ್ಗೆ ಭರ್ಜರಿ ಭಾಷಣ ಮಾಡ್ತಾರೆ. ಆದರೆ ಇಲ್ಲಿ ಮಾಜಿ ಮುಖ್ಯಮಂತ್ರಿಯ ಮೊಮ್ಮಗ, ಮಾಜಿ ಮುಖ್ಯಮಂತ್ರಿಯ ಮಗನಿಗೆ ಟಿಕೆಟ್ ನೀಡಿದ್ದಾರೆ.

ಇದು ಕುಟುಂಬ ರಾಜಕಾರಣ ಅಲ್ಲವೇ ಮೋದಿ ಯವರೇ? ನಾನು ನಾಡಿನ ಜನತೆಯ ಪ್ರೀತಿ, ಆಗ್ರಹಗಳಿಗೆ ಬಗ್ಗುತ್ತೇನೆಯೇ ಹೊರತು, ಬಿಜೆಪಿ ಮತ್ತು ದೇವೇಗೌಡರ ಷಡ್ಯಂತ್ರಗಳಿಗೆ ಬಗ್ಗಲ್ಲ, ಜಗ್ಗುವುದೂ ಇಲ್ಲ. ಎಲ್ಲಿಯವರೆಗೂ ರಾಜ್ಯದ ಜನರ ಆಶೀರ್ವಾದ ಇರುತ್ತದೆಯೋ ಅಲ್ಲಿಯವರೆಗೂ ನಾನು ಬಿಜೆಪಿ ಕುತಂತ್ರಗಳಿಗೆ ಬಗ್ಗುವುದಿಲ್ಲ ಎಂದು ಹೇಳಿದರು.

40 ವರ್ಷಗಳಿಂದ ನಾನು ಮಂತ್ರಿಯಾಗಿದ್ದೇನೆ, ಮುಖ್ಯಮಂತ್ರಿಯಾಗಿದ್ದೀನಿ. ಸಣ್ಣ ಕಪ್ಪು ಚುಕ್ಕೆ ಕೂಡ ನನ್ನ ಮೇಲಿಲ್ಲ. ಆದರೂ ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡಿ ನನ್ನನ್ನು ತೇಜೋವಧೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ