Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳಮೀಸಲಾತಿ ಬಗ್ಗೆ ಸಿದ್ದರಾಮಯ್ಯ ಮಹತ್ವದ ಹೇಳಿಕೆ 

Advertisement
ರಾಯಚೂರು : ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ, ಒಳ ಮೀಸಲಾತಿಗೆ ನಮ್ಮ ಸರ್ಕಾರದ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ, ಶೈಕ್ಷಣಿಕ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.

ವರದಿಯಲ್ಲಿ ಸಣ್ಣಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು. ಪಕ್ಷದ ರಾಜ್ಯ ಮಟ್ಟದ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ.

ವಿರೋಧಪಕ್ಷಗಳು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ರಾಜೀನಾಮೆ ಬೇಡಿದರೆ, ರಾಜೀನಾಮೆ ಕೊಡಲು ಸಾಧ್ಯವಿಲ್ಲ. ಸುಳ್ಳು ಆರೋಪಗಳನ್ನು ಮಾಡಿದರೆ, ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದರು.

ಜಿ.ಟಿ.ದೇವೇಗೌಡ ಅವರು ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಲ್ಲಿದ್ದು, ಮುಡಾದ ಸದಸ್ಯರೂ ಆಗಿದ್ದಾರೆ. ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ. ಈ ಪ್ರಕರಣದ ವಿರುದ್ಧ ವಿರೋಧ ಪಕ್ಷದವರು ಪಾದಯಾತ್ರೆಯನ್ನು ನಡೆಸುವುದು ಬೇಡ ಎಂದವರಲ್ಲಿ ಜಿ.ಟಿ ದೇವೇಗೌಡರು ಒಬ್ಬರು.

ವಿರೋಧಪಕ್ಷದ ನಾಯಕರಾದ ಆರ್. ಅಶೋಕ್ ಅವರ ಮೇಲೆ ಎಫ್.ಐ.ಆರ್ ಆಗಿರುವುದರಿಂದ ಮೊದಲು ಅವರು ರಾಜೀನಾಮೆ ನೀಡಲಿ, ಜಮೀನು ಖರೀದಿ ಹಗರಣದಲ್ಲಿ ಅವರು ಈ ಹಿಂದೆ ಭಾಗಿಯಾಗಿದ್ದರು ಎಂದು ತಿರುಗೇಟು ನೀಡಿದರು.

ಕರ್ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. 1973 ರಲ್ಲಿ ಮೈಸೂರು ರಾಜ್ಯಕ್ಕೆ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದ್ದಕ್ಕೆ 50 ವರ್ಷಗಳು ತುಂಬಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮವನ್ನು ಇಂದು ಆಚರಿಸಲಾಗುತ್ತಿದೆ. ಈ ಪ್ರಯುಕ್ತ ವಿಧಾನಸೌಧದಲ್ಲಿ ಭುವನೇಶ್ವರಿ ಪ್ರತಿಮೆಯನ್ನೂ ಸಹ ಪ್ರತಿಷ್ಠಾಪಿಸಲಾಗುತ್ತಿದೆ. ಗೋಕಾಕ್ ಚಳವಳಿ ಮತ್ತು ಕನ್ನಡ ಸಂಭ್ರಮಕ್ಕೆ ಸಂಬಂಧಪಟ್ಟಂತೆ ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ಮಾಡುತ್ತಿರುವ ಕಾರ್ಯಕ್ರಮವಾಗಿದೆ ಎಂದು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ