ಬೆಂಗಳೂರು: ಕಳೆದ ಮೂರು ವರ್ಷಗಳಿಂದ ಭಾರೀ ಕುತೂಹಲ ಮೂಡಿಸಿದ್ದ ಕರ್ನಾಟಕ ಕಾಂಗ್ರೆಸ್‌ನ ಅಧಿಕಾರ ಹಸ್ತಾಂತರ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಯಿಂದ ಕೆಳಗಿಳಿಯಲು ಅಧಿಕೃತವಾಗಿ ತೀರ್ಮಾನಿಸಿದ್ದಾರೆ.
ಇಂದು ಬೆಳಗ್ಗೆ ತಮ್ಮ ನಿವಾಸ ಕಾವೇರಿಯಲ್ಲಿ ಹಮ್ಮಿಕೊಂಡಿದ್ದ ಕೊನೆಯ ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಸಚಿವರ ಸಮ್ಮುಖದಲ್ಲೇ ಈ ಮಹತ್ವದ ಘೋಷಣೆ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ಬಿಡುತ್ತಿರುವ ವಿಷಯ ಕೇಳಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತೀವ್ರ ಭಾವುಕರಾಗಿದ್ದಾರೆ. ಮೀಟಿಂಗ್ ಮುಗಿಸಿ ಕಾರಿನಲ್ಲಿ ವಾಪಸ್ ತೆರಳುತ್ತಿದ್ದಾಗ ಅವರು ಕಣ್ಣೀರು ಹಾಕಿದ್ದು, ಮಾಧ್ಯಮಗಳಿಗೆ ಕೈಮುಗಿದು ಏನೂ ಮಾತನಾಡದೆ ಅಲ್ಲಿಂದ ಹೊರಟಿದ್ದಾರೆ.

