Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಾನಂದ ನೀಲಣ್ಣವರ ವಂಚನೆ ಕೇಸ್ : ನಟಿ ಸನ್ನಿ ಲಿಯೋನ್ ಗೆ ಸಿಐಡಿ ನೋಟಿಸ್ 

Advertisement

ಬೆಳಗಾವಿ: ಬೆಳಗಾವಿಯ ಶಿವಾನಂದ ನೀಲಣ್ಣವರ್ ಮಾಲೀಕತ್ವದ ಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಸನ್ನಿ ಲಿಯೋನ್ ಗೆ ಕರ್ನಾಟಕ ಸಿಐಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

ಕಂಪನಿಯ ಮಾಲೀಕ ಶಿವಾನಂದ ನೀಲಣ್ಣವರ, ಸಾರ್ವಜನಿಕರಿಂದ ಕಾನೂನುಬಾಹಿರವಾಗಿ ಸಂಗ್ರಹಿಸಿದ ಹಣದ ಒಂದು ಭಾಗವನ್ನು ಸನ್ನಿ ಲಿಯೋನ್ ಸೇರಿದಂತೆ ಹಲವು ನಟ-ನಟಿಯರಿಗೆ ವರ್ಗಾವಣೆ ಮಾಡಿರುವುದು ಸಿಐಡಿ ತನಿಖೆಯಿಂದ ಬಹಿರಂಗವಾಗಿದೆ.ಈ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಐಡಿ ಡಿಐಜಿ ಭೀಮಾಶಂಕರ ಗುಳೇದ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಸಾರ್ವಜನಿಕರ ಹಣವನ್ನು ಸಿನಿಮಾ ನಟರಿಗೆ ನೀಡಿರುವ ಬಗ್ಗೆ ನಮಗೆ ಸ್ಪಷ್ಟ ಮಾಹಿತಿ ಲಭ್ಯವಾಗಿದೆ.

ಈ ಹಿನ್ನೆಲೆಯಲ್ಲಿ ನಟಿ ಸನ್ನಿ ಲಿಯೋನ್ ಸೇರಿದಂತೆ ಹಣ ಪಡೆದ ಇತರೆ ನಟ-ನಟಿಯರಿಗೂ ನೋಟಿಸ್ ನೀಡಿ ವಿಚಾರಣೆಗೆ ಕರೆಯಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಆರೋಪಿ ಶಿವಾನಂದ ನೀಲಣ್ಣವರ ಒಟ್ಟು 40,700 ಹೂಡಿಕೆದಾರರಿಂದ ಬರೊಬ್ಬರಿ 2,400 ಕೋಟಿ ರೂಪಾಯಿಗಳನ್ನು ಕಾನೂನುಬಾಹಿರವಾಗಿ ಸಂಗ್ರಹಿಸಿದ್ದಾನೆ. ಇದರಲ್ಲಿ ಸುಮಾರು 10,000 ಹೂಡಿಕೆದಾರರು ನೆರೆಯ ಮಹಾರಾಷ್ಟ್ರ ರಾಜ್ಯದವರಾಗಿದ್ದಾರೆ.

 ಸಂಗ್ರಹಿಸಿದ ಭಾರಿ ಮೊತ್ತದಲ್ಲಿ 540 ಕೋಟಿ ರೂಪಾಯಿಗಳನ್ನು ಆತ ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿ, ಅದರಲ್ಲಿ 170 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾನೆ.

ಈ ವಂಚನೆಯ ಜಾಲವನ್ನು ನಡೆಸಲು ಆತ ಸುಮಾರು 30 ಬ್ಯಾಂಕ್ ಖಾತೆಗಳನ್ನು ಬಳಸಿದ್ದು, ಕೇವಲ ಒಂದು ಖಾತೆಯಲ್ಲೇ 36,200 ಪುಟಗಳಷ್ಟು ದೀರ್ಘವಾದ ವಹಿವಾಟಿನ ಇತಿಹಾಸ ಇದೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಅಚ್ಚರಿಯ ವಿಷಯವೆಂದರೆ, ಆರೋಪಿಯನ್ನು ಪೊಲೀಸರು ಬಂಧಿಸಿದ ನಂತರವೂ ಜನರು ಆತನ ಕಂಪನಿಯಲ್ಲಿ ಹೂಡಿಕೆ ಮಾಡುತ್ತಲೇ ಇದ್ದಾರೆ.

ಬಂಧನದ ಕೇವಲ 20 ದಿನಗಳ ಅವಧಿಯಲ್ಲೂ ವಂಚಕನ ಖಾತೆಗೆ ಸಾರ್ವಜನಿಕರು ಮತ್ತೆ 5 ಕೋಟಿಗೂ ಅಧಿಕ ಹಣವನ್ನು ವರ್ಗಾವಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿಯಾಗಿ 12 ವರ್ಷ ಪೂರೈಸಿದ ಮೋದಿ : ಬಿಜೆಪಿ ನಾಯಕರಿಂದ ವಿವಿಧೆಡೆ ವಿಶೇಷ ಪೂಜೆಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಹಣ ದುರುಪಯೋಗ : ಡಾ. ಮಹೇಶ್ ಜೋಶಿ ಅಜೀವ ಸದಸ್ಯತ್ವ ವಜಾ ಶಿವಾನಂದ ನೀಲಣ್ಣವರ ವಂಚನೆ ಕೇಸ್ : ನಟಿ ಸನ್ನಿ ಲಿಯೋನ್ ಗೆ ಸಿಐಡಿ ನೋಟಿಸ್ ಇಂದು ದೆಹಲಿಗೆ ಡಿ. ಕೆ ಶಿವಕುಮಾರ್ : ನೀತಿ ಆಯೋಗದ ಸಭೆಯಲ್ಲಿ ಭಾಗಿಆರ್ ಬಿ ತಿಮ್ಮಾಪುರ ಅವರಿಗೆ ಮಂತ್ರಿ ಸ್ಥಾನ ನೀಡಬೇಕು : ಕೆಪಿಸಿಸಿ ಮಾಧ್ಯಮ ವಕ್ತಾರ ರಾವಸಾಬ ಐಹೊಳೆವಿಶೇಷ ಸಂಪನ್ಮೂಲ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ ನ ಮೂವರು, ಬಿಜೆಪಿ ಓರ್ವ ಅವಿರೋಧ ಆಯ್ಕೆ ಬಾಗಲಕೋಟೆಯಲ್ಲಿ ಸರ್ಕಾರಿ ನೌಕರನಿಗೆ ಡಿಜಿಟಲ್ ಅರೆಸ್ಟ್ : 83.82 ಲಕ್ಷ ರೂ. ದೂಚಿದ ಖದೀಮರು ಪತಿಯೊಂದಿಗೆ ಜಗಳವಾಡಿ ತವರಿಗೆ ತೆರಳುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್ : 10 ಜನ ಅರೆಸ್ಟ್  ಉತ್ತಮ ಸಮಾಜಕ್ಕೆ ಆರೋಗ್ಯವಂತ ಜನರೇ ಆಸ್ತಿ: ಶ್ರೀ ವಿಜಯಕುಮಾರ್