LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಶಿವಾನಂದ ನೀಲಣ್ಣವರ್ ವಂಚನೆ ಕೇಸ್ : ಚಿತ್ರರಂಗದ ನಟ, ನಟಿಯರಿಗೆ ಶಾಕ್ 

Advertisement

ಬೆಳಗಾವಿ: ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ಹಣ ವಂಚಿಸಿದ ಆರೋಪದ ಮೇಲೆ ಈಗಾಗಲೇ ಜೈಲು ಪಾಲಾಗಿರುವ ಬೆಳಗಾವಿಯ 'ಶಿವಂ ಅಸೋಸಿಯೇಟ್ಸ್' ಮಾಲೀಕ ಶಿವಾನಂದ ನೀಲಣ್ಣವರ್ ಪ್ರಕರಣ, ಇದೀಗ ಸ್ಯಾಂಡಲ್‌ವುಡ್‌ ಅಂಗಳಕ್ಕೆ ಲಗ್ಗೆ ಇಟ್ಟಿದೆ. 

ಆರೋಪಿ ಶಿವಾನಂದ ತನ್ನ ಸಂಸ್ಥೆಯ ಪ್ರಚಾರಕ್ಕಾಗಿ ಹೂಡಿಕೆದಾರರ ಕಷ್ಟದ ಹಣವನ್ನು ಬಳಸಿ ಸ್ಟಾರ್ ನಟ-ನಟಿಯರನ್ನು ಕರೆಸಿ ಅದ್ದೂರಿ ಕಾರ್ಯಕ್ರಮ ಆಯೋಜಿಸಿದ್ದೇ ಈಗ ಚಿತ್ರರಂಗದ ಗಣ್ಯರಿಗೆ ತಲೆನೋವಾಗಿ ಪರಿಣಮಿಸಿದೆ.

ಈ ಅಕ್ರಮ ಹಣದ ವಹಿವಾಟಿಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಸ್ಯಾಂಡಲ್‌ವುಡ್ ತಾರೆಯರಿಗೆ ನೋಟಿಸ್ ನೀಡಲು ಸಜ್ಜಾಗಿದ್ದಾರೆ.

'ಬೆಳಗಾವಿ ಹಬ್ಬ'ದ ಹೆಸರಲ್ಲಿ ಅದ್ದೂರಿ ಕಾರ್ಯಕ್ರಮ: ಕಳೆದ ವರ್ಷ ಡಿಸೆಂಬರ್ 27 ರಂದು ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣವರ್ ನೇತೃತ್ವದಲ್ಲಿ 'ಬೆಳಗಾವಿ ಹಬ್ಬ' ಎಂಬ ಅದ್ದೂರಿ ಉತ್ಸವವನ್ನು ಆಯೋಜಿಸಲಾಗಿತ್ತು.

ಬೆಳಗಾವಿಯ ಕರವೇ ಜಿಲ್ಲಾಧ್ಯಕ್ಷ ಹಾಗೂ ಸಿನಿಮಾ ನಟ ಎಂದು ಹೇಳಿಕೊಳ್ಳುವ ಅಭಿಲಾಷ್ ನೇತೃತ್ವದಲ್ಲಿ ಈ ಇಡೀ ಕಾರ್ಯಕ್ರಮ ನಡೆದಿತ್ತು. 

ಸಾರ್ವಜನಿಕರನ್ನು ಸೆಳೆಯಲು ಹಾಗೂ ತಾನೊಬ್ಬ ದೊಡ್ಡ ಉದ್ಯಮಿ ಎಂದು ಬಿಂಬಿಸಿಕೊಳ್ಳಲು ಆರೋಪಿ ಶಿವಾನಂದ ಈ ವೇದಿಕೆಯನ್ನು ಬಳಸಿಕೊಂಡಿದ್ದ ಎನ್ನಲಾಗಿದೆ.

ವೇದಿಕೆ ಹಂಚಿಕೊಂಡಿದ್ದ ಸ್ಟಾರ್ ನಟ-ನಟಿಯರು: ಅಂದು ನಡೆದ ಈ ಅದ್ದೂರಿ ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್‌ನ ಖ್ಯಾತ ನಟರಾದ ಡಾಲಿ ಧನಂಜಯ, ಸಪ್ತಮಿ ಗೌಡ, ನೀನಾಸಂ ಸತೀಶ್, ರಾಗಿಣಿ ದ್ವಿವೇದಿ, ದಿಗಂತ್ ಹಾಗೂ ಐಂದ್ರಿತಾ ರೈ ದಂಪತಿ, ವಶಿಷ್ಠ ಸಿಂಹ ಮತ್ತು ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ರಂಗು ತುಂಬಿದ್ದರು. ಹೂಡಿಕೆದಾರರ ಕೋಟ್ಯಂತರ ರೂಪಾಯಿ ವಂಚನೆಯ ಹಣದಲ್ಲೇ ಈ ಎಲ್ಲ ತಾರೆಯರನ್ನು ಕರೆಸಲಾಗಿತ್ತು ಎಂಬ ಗಂಭೀರ ಆರೋಪ ಈಗ ಕೇಳಿಬಂದಿದೆ.

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ ಪರಿಹಾರಕ್ಕಾಗಿ ₹22,400 ಕೋಟಿ ಕೊಡಿ : ಕೇಂದ್ರಕ್ಕೆ ಮತ್ತೆ ಪತ್ರ ಬರೆದ ಜಿ. ಪರಮೇಶ್ವರ್ಮೈದಾನದಲ್ಲೇ ದುರಂತ: ಗೋಲ್‌ಕೀಪರ್ ಡಿಕ್ಕಿಯಾಗಿ ಆಟಗಾರ ಸಾವುಮಾನ್ವಿ ತಾಲೂಕಿನಲ್ಲಿ 70ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳ ದಾಖಲೆಮಾನ್ವಿ ಪಟ್ಟಣದ ಕುಡಿಯುವ ನೀರಿನ ಕೆರೆ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಿ: ಎನ್.ಎಸ್. ಬೋಸರಾಜುಬಾಪುರ ನರಸಿಂಹ ಶೆಟ್ಟಿ ಕುಟುಂಬಕ್ಕೆ ಆರ್ಯವೈಶ್ಯ ಸಂಘದಿಂದ 2 ಲಕ್ಷ ಸಹಾಯಧನಗೋಕಾಕನಲ್ಲಿ ಮಹಿಳೆ ಕೊಲೆ ಆರೋಪ: ಪ್ರಿಯಕರನ ವಿರುದ್ಧ ಎಫ್‌ಐಆರ್ಸ್ಟಿಂಗ್ ಆಪರೇಷನ್‌ಗೆ ಕರ್ನಾಟಕ ಮಾಡೆಲ್ ಆಗಲಿದೆ:  ಕೆ.ಎನ್.ರಾಜಣ್ಣ ಕೆ. ವಿ. ಅನಿಸ್ ಅಮೋಘ ಶತಕ : ಇನ್ನಿಂಗ್ಸ್ ಗೆಲುವಿನತ್ತ ಕರ್ನಾಟಕ ಚಿತ್ತ ವೈಭವ್ ಸೂರ್ಯವಂಸಿ, ರಜತ ಪಟಿದಾರ್ ಗೆ ಸ್ಥಾನ ರಿಂಗ್ ರೋಡ್ ಬೇಡ, ಪಾಣಂದ್ ರಸ್ತೆಗಳನ್ನು ದುರಸ್ತಿ ಮಾಡಿ - ಸದಲಗಾ ಭಾಗದ ರೈತರ ಏಕಮುಖ ಬೇಡಿಕೆ